ತುಮಕೂರು
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳಿಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಇಂದು ಸನ್ಮಾನ ಸಮಾರಂಭ ನಡೆಯಿತು. ಕೊರಟಗೆರೆಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದು ವಿಶೇಷವಾಗಿತ್ತು ಇದರ ಜೊತೆಯಲ್ಲಿ ಕಾಂಗ್ರೆಸ್ನ ಒಗ್ಗಟ್ಟು ಪ್ರದರ್ಶನ ಕೂಡ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ-ಹಾಲಿ ಪ್ರಮುಖ ನಾಯಕರು ಸೇರಿದಂತೆ ಕಾಂಗ್ರೆಸ್ ನ ಹಿರಿಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾಕ್ಟರ್ ಜಿ ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದಿರುವುದು ನಮಗೆ ಸಂತೋಷ ಉಂಟುಮಾಡಿದ್ದು ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬದ್ರ ಪಡಿಸುವಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಕೊಡುಗೆ ಅಪಾರವಾಗಿದ್ದು ಕಾಂಗ್ರೆಸ್ ಪಕ್ಷದ ಪರವಾಗಿ ಗೆದ್ದಿರುವ ಅಭ್ಯರ್ಥಿಗಳಿಗೆ ಪಕ್ಷ ಹಾಗೂ ಮುಖಂಡರು ಹಾಗೂ ಕಾರ್ಯಕರ್ತರ ಪರವಾಗಿ ಅಭಿನಂದನೆಗಳನ್ನು ತಿಳಿಸಿದರು ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಕೊರಟಗೆರೆ ಶಾಸಕ ಡಾಕ್ಟರ್ ಜಿ ಪರಮೇಶ್ವರ್ ಅವರು ಈ ಬಾರಿ ಶೇಕಡಾ 60ರಷ್ಟು ಯುವಕರು ಗ್ರಾಮ ಪಂಚಾಯಿತಿ ಆಯ್ಕೆಯಾಗಿದ್ದು ಇದು ರಾಜಕೀಯದಲ್ಲಿ ದಿಕ್ಕನ್ನೇ ಬದಲಾಯಿಸುವ ಸೂಚನೆ ಕಾಣುತ್ತಿದೆ ಎಂದರು. ಗಾಂಧೀಜಿಯವರು ಗ್ರಾಮ ಸ್ವರಾಜ್ ಕನಸಿನ ಕಂಡಿದ್ದರು ಅದರಂತೆ ಗ್ರಾಮದ ಅಭಿವೃದ್ಧಿಯನ್ನು ಗ್ರಾಮದವರೇ ತೀರ್ಮಾನ ಮಾಡಬೇಕು ಎಂಬುದು ಗಾಂಧೀಜಿಯವರ ಕನಸಾಗಿತ್ತು ಈಗ ಅದು ನೆರವೇರುವ ಕಾಲ ಸನ್ನಿಹಿತವಾಗಿದೆ ಎಂದರು.ಎಲ್ಲಾ ಸಮುದಾಯಗಳು ಒಗ್ಗಟ್ಟಾಗಬೇಕು ಗ್ರಾಮಸ್ವರಾಜ್ ಪ್ರಜಾಪ್ರಭುತ್ವದ ಅಡಿಪಾಯವಾಗಬೇಕು ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು .ಕಾರ್ಯಕ್ರಮದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದರು ಡಾಕ್ಟರ್ ಜಿ ಪರಮೇಶ್ವರ್ ಅವರು ಬಿಜೆಪಿ ಸರ್ಕಾರವನ್ನು ಸುಳ್ಳಿನ ಸರ್ಕಾರ ಪ್ರತಿ ಹಂತದಲ್ಲೂ ತಾರತಮ್ಯ , ಅನುದಾನದಲ್ಲಿ ತಾರತಮ್ಯ, ನಾಡಿನ ಜನತೆಗೆ ಸುಳ್ಳನ್ನೇ ಹೇಳುತ್ತಾ ಸರ್ಕಾರವನ್ನು ನಡೆಸುತ್ತಿದ್ದಾರೆ .ಕಾಂಗ್ರೆಸ್ ಸರ್ಕಾರದಲ್ಲಿ ಎತ್ತಿನಹೊಳೆಗೆ 150 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು ಬಿಜೆಪಿ ಸರ್ಕಾರ ಇದುವರೆಗೂ ಒಂದು ನಯಾಪೈಸೆಯೂ ಬಿಡುಗಡೆ ಮಾಡಿಲ್ಲ ಇನ್ನೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಅಲ್ಲಿನ ಜನ ಜಾನುವಾರು ಸಂಕಷ್ಟಕ್ಕೀಡಾಗಿದ್ದು ಇದುವರೆಗೂ ಅವರ ಕಷ್ಟವನ್ನು ಈಡೇರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ನೇರ ವಾಗ್ದಾಳಿ ನಡೆಸಿದರು.ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ಜನರೇ ಕಲಿಸುತ್ತಾರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.
ಜೆಡಿಎಸ್ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದ ಕೆ ಎನ್ ರಾಜಣ್ಣ.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ k n ರಾಜಣ್ಣನವರು ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜಣ್ಣನವರು ಜೆಡಿಎಸ್ ಪಕ್ಷದವರು ಕುಟುಂಬ ರಾಜಕಾರಣದಲ್ಲಿ ನಿರತರಾಗಿದ್ದಾರೆ ದೇವೇಗೌಡರು ಜಾತಿವಾದಿಯಲ್ಲ ಕುಟುಂಬ ವಾದಿಗಳ ಆಗಿದ್ದಾರೆ ಅವರು ಕೇವಲ ಅವರ ಕುಟುಂಬದ ಏಳಿಗೆಯನ್ನು ಬಯಸುತ್ತಾರೆ ವಿನಹ ಬೇರೆಯವರ ಏಳಿಗೆಯನ್ನು ದೇವೇಗೌಡ ಹಾಗೂ ಅವರ ಕುಟುಂಬದವರು ಎಂದಿಗೂ ಸಹಿಸುವುದಿಲ್ಲ ಎಂದರು.
ಇನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಶಕ್ತಿವಂತ ಯುವ ನಾಯಕರು ಅಧಿಕಾರ ವಹಿಸಿಕೊಂಡಿದ್ದು ,ಸಿದ್ದರಾಮಯ್ಯ ಹಾಗೂ ಪಕ್ಷದ ಹಿರಿಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರ ಸಹಕಾರದಿಂದ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕೆ ಎನ್ ರಾಜಣ್ಣ ತಿಳಿಸಿದರು.ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಕೆ ಎನ್ ರಾಜಣ್ಣನವರು ಸುಳ್ಳು ಹೇಳುವುದರಲ್ಲಿ ಬಿಜೆಪಿ ಸರ್ಕಾರ ಹಾಗೂ ಸರ್ಕಾರದ ಸಚಿವರು ನಿಸ್ಸೀಮರು. ಅದಕ್ಕಾಗಿ ಅವರಿಗೆ ಬಿರುದನ್ನು ನೀಡಬೇಕು. ಆದರೆ ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು ಯಾರು ಯಾವ ಹುದ್ದೆಯನ್ನು ಅಲಂಕರಿಸಬೇಕು ಎಂಬುದನ್ನು ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಅದರಂತೆ ನಾವು ಕೆಲಸ ಮಾಡುತ್ತೇವೆ ಆದರೆ ಬಿಜೆಪಿ ಪಕ್ಷದಲ್ಲಿ ಹಾಗಿಲ್ಲ.ಮುಂಬರುವ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ತುಮಕೂರು ಜಿಲ್ಲೆಯಲ್ಲಿ ಎಂಟರಿಂದ ಒಂಬತ್ತು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದದ್ದೇ ಆದರೆ ಎಸ್ಸಿಎಸ್ಟಿ ಗಳು ಹಾಗೂ ಇತರೆ ಜಾತಿಗಳ ಎಲ್ಲಾ ತರಹದ ರಿಸರ್ವೇಶನ್ ಗಳನ್ನು ತೆಗೆದುಹಾಕುವ ಹುನ್ನಾರ ಬಿಜೆಪಿಯ ದಾಗಿದೆ ಬಿಜೆಪಿಯನ್ನು ಬುಡಸಮೇತ ಕಿತ್ತೊಗೆಯುವಲ್ಲಿ ಎಲ್ಲರ ಸಹಕಾರ ಅತ್ಯಗತ್ಯ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಇನ್ನು ಕಾರ್ಯಕ್ರಮದಲ್ಲಿ ಹಿರಿಯ ನಾಯಕರಾದ ಟಿಬಿ ಜಯಚಂದ್ರ, ವೆಂಕಟರಮಣಪ್ಪ ,ಕುಣಿಗಲ್ ಶಾಸಕ ರಂಗನಾಥ ,ತಿಪಟೂರಿನ ಷಡಕ್ಷರಿ, ಆರ್ ರಾಮಕೃಷ್ಣ ,ರಮೇಶ್ ಬಾಬು ಸೇರಿದಂತೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.