ತುಮಕೂರು ಕಾರಿನಲ್ಲಿ ಮೃತ ಪಟ್ಟ ಮುವರ ಪ್ರಕರಣ,6ಮಂದಿ ವಶಕ್ಕೆ,ಸಾವಿಗೆ  ಕಾರಣನಾ ನಕಲಿ ಚಿನ್ನ ದಂದೆ….????

 

ತುಮಕೂರು ಕಾರಿನಲ್ಲಿ ಮೃತ ಪಟ್ಟ ಮುವರ ಪ್ರಕರಣ,6ಮಂದಿ ವಶಕ್ಕೆ,ಸಾವಿಗೆ  ಕಾರಣನಾ ನಕಲಿ ಚಿನ್ನ ದಂದೆ….????

 

ಮೃತರ ಭಾವಚಿತ್ರ

ತುಮಕೂರು/ಬೆಳ್ತಂಗಡಿ: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಕಾರಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

 

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

 

 

12 ದಿನಗಳ ಹಿಂದೆ ದಕ್ಷಿಣ ಕನ್ನಡದ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್‌ ಹಮೀದ್ (45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ತುಮಕೂರಿಗೆ ತೆರಳಿದ್ದರು.

 

 

 

 

ಈ ಮೂವರು ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ‘ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ, ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ’ ಎಂದು ಸುಳ್ಳು ಹೇಳಿ ಆರೋಪಿಗಳು ಈ ಮೂವರನ್ನು ಹಣ ದೋಚುವ ಪ್ಲಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

 

 

 

ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮೂವರ ಮೃತದೇಹಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ.

 

 

 

 

ಇನ್ನು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು ಬೆಳ್ತಂಗಡಿಂದ ತುಮಕೂರಿಗೆ ಬಂದು ಕಾರು ಹಾದು ಹೋಗಿರುವ ಎಲ್ಲಾ ಭಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

 

 

 

 

ಇನ್ನು ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಅಲರ್ಟ್ ಆಗಿರುವ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಅಶೋಕ್ ಕೆ ವಿ ಹಾಗೂ ಐ.ಜಿ ರವಿಕಾಂತೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

ಅದೇನೇ ಇರಲಿ ಮೂವರನ್ನು ಕಾರಿನಲ್ಲಿ ಇಟ್ಟು ಸುಟ್ಟ ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸಿದ್ದು ಪೊಲೀಸರ ತನಿಖೆ ನಂತರವಷ್ಟೇ ಸತ್ಯಾ ಸತ್ಯತೆ ಹೊರಬರಲಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version