ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಾ ಪಟ್ಟ ಹಿನ್ನಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಈ ಹಿಂದಿನ ಶೈಕ್ಷಣಿಕ ದಾಖಲೆಗೆಳ ಆಧಾರದ ಮೇಲೆ ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ತಿಳಿಸಿ ಆದೇಶಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು(ಪ್ರೌಢ ಶಿಕ್ಷಣ) ಸುತ್ತೋಲೆ ಹೊರಡಿಸಿದ್ದು, ಕೋವಿಡ್ -19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳಲ್ಲಿ ಶೈಕ್ಷಣಿಕ ಪ್ರಕ್ರಿಯೆ ಪ್ರತಿ ವರ್ಷದಂತೆ ನಿರ್ವಹಿಸಲು ಸಾಧ್ಯವಾಗಿರುವುದಿಲ್ಲ.
ಇಂತಹ ಕಠಿಣ ಸನ್ನಿವೇಶದಲ್ಲಿಯೂ ಕೂಡ ಮಕ್ಕಳ ಬೋಧನಾ ಕಲಿಕಾ ಪ್ರಕ್ರಿಯೆಯಿಂದ ವಂಚಿತರಾಗಬಾರದೆಂದು ವಿದ್ಯಾಮಗ ಕಾರ್ಯಕ್ರಮ, ದೂರದರ್ಶನದ ಚಂದನ ವಾಹಿನಿಯಲ್ಲಿ ( ಸಂವೇದ ಕಾರ್ಯಕ್ರಮ) ಪಾಠಪ್ರಸಾರ, ರೇಡಿಯೋ ಪಾಠ ಪ್ರಸಾರ ಮಾಡಲಾಗಿದೆ.
ಹಲವಾರು ಶಾಲೆಗಳಲ್ಲಿ ಆನ್ ಲೈನ್ ವಿಧಾನದಲ್ಲಿ ತರಗತಿಗಳನ್ನು ನಡೆಸುವ, ಮಕ್ಕಳನ್ನು ತಲುಪುವ ಪ್ರಯತ್ನ ಮಾಡಲಾಗಿದೆ. ಆದ್ರೇ ಪ್ರಸಕ್ತ ಸಾಲಿನಲ್ಲಿ ಶಾಲೆಗಳಲ್ಲಿ ನಿರ್ವಹಿಸಿದ ಕೆಲವು ಬೋಧನಾ ಕಲಿಕೆ ಪ್ರಕ್ರಿಯೆಯ ಪ್ರಯತ್ನಗಳಿಗೆ ಮೌಲ್ಯಮಾಪನ ನಿರ್ವಹಿಸಿ, ವಿಶ್ಲೇಷಿಸಿ, ಮುಕ್ತಾಯಗೊಳಿಸಬೇಕೆಂದಿರುವ ಸಂದರ್ಭದಲ್ಲಿ ಪುನಹ ಕೋವಿಡ್ -19 ಸೋಂಕು ಹೆಚ್ಚಾಗಿರುವ ಹಿನ್ನಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ವಿದ್ಯಾಗಮ, ಶಾಲೆಗಳಲ್ಲಿ ನಡೆಯುತ್ತಿರುವ 6 – 9ನೇ ತರಗತಿಗಳನ್ನು ದಿನಾಂಕ 20-04-2021ರವೆರೆಗೆ ಸ್ಥಗಿತಗೊಳಿಸಲಾಗಿದೆ.
ಈ ಕುರಿತು ವಿವಿಧ ಸರ್ಕಾರಿ, ಖಾಸಗಿ, ಶಾಲಾ ಸಂಘಟನೆಗಳು, ಆಡಳಿತ ಮಂಡಳಿ, ಶಿಕ್ಷಕರು, ಪೋಷಕರ ಅಭಿಪ್ರಾಯದ ಸಭೆ ನಡೆಯಲಾಗಿದೆ. ಸಭೆಯಲ್ಲಿ ಭಾಗವಹಿಸಿದ ಕೆಲವರು ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿಗಳ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ. ರಾಜ್ಯ ಪಠ್ಯಕ್ರಮದ ಕೆಲವು ಶಾಲೆಗಳಲ್ಲಿ ಈಗಾಗಲೇ ಸಂಕಲನಾತ್ಮಕ ಮೌಲ್ಯಾಂಕವನ್ನು ಪೂರ್ಣಗೊಳಿಸಲಾಗಿ. ಹಾಗೂ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಈ ಎಲ್ಲಾ ಹಿನ್ನಲೆಯಲ್ಲಿ 2020-21ನೇ ಸಾಲಿನ 1 ರಿಂದ 9ನೇ ತರಗತಿಯ ಮಕ್ಕಳ ಕಲಿಕಾ ಪ್ರಗತಿಯ ಮೌಲ್ಯಾಂಕನ ವಿಶ್ಲೇಷಣೆ ಹಾಗೂ ಫಲಿತಾಂಶ ಪ್ರಕಟಣೆಯ ನಿರ್ವಹಣೆಯ ಕುರಿತು, ಈ ಮುಂದಿನ ಮಾರ್ಗಸೂಚಿ ನೀಡಲಾಗಿದೆ.