14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು.

 

 

 

ತುಮಕೂರು_14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಅತ್ಯಾಚಾರ ಹಾಗೂ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯ ಮೇಲೆ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.

 

 

 

ತುಮಕೂರು ತಾಲೂಕಿನ ಪಂಡಿತನಹಳ್ಳಿ ಬಳಿಯ 14 ವರ್ಷದ ಬಾಲಕಿ ಸ್ಥಳೀಯ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು  45 ವರ್ಷದ ವ್ಯಕ್ತಿ ಅಪ್ರಾಪ್ತ ಬಾಲಕಿಯ   ಮೇಲೆ ಅತ್ಯಾಚಾರ ಮಾಡಿರುವ ಆರೋಪದಡಿ ವ್ಯಕ್ತಿಯ ಮೇಲೆ ತುಮಕೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

 

ತನಿಖೆ ಕೈಗೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಆರೋಪಿಗಾಗಿ ಬಲೆ ಬೀಸಿದ್ದು ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.

 

ಇನ್ನು ಘಟನೆ ಸಂಬಂಧ ಬಾಲಕಿಯ ಸಂಬಂಧಿಯೊಬ್ಬರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಫೋಸ್ಕೋ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.

 

ವರದಿ_ ಮಾರುತಿ ಪ್ರಸಾದ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!