2023ರ ಚುನಾವಣೆ ಪಾವಗಡ ವಿ.ಸ ಕ್ಷೇತ್ರದಲ್ಲಿ ಎಡಗೈ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ಮುಖಂಡರ ಆಗ್ರಹ.
ತುಮಕೂರು_ಮುಂಬರುವ 2023ರ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಎಡಗೈ ಸಮುದಾಯ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆಂಚಮಾರಯ್ಯನವರು ಹಿರಿಯ ಕಾಂಗ್ರೆಸ್ ಮುಖಂಡರಲ್ಲಿ ಒತ್ತಾಯಿಸಿದ್ದಾರೆ.
ಇನ್ನು ತುಮಕೂರು ಜಿಲ್ಲೆಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಎಡಗೈ ಸಮುದಾಯದ ಮತದಾರರಿದ್ದು ಇದುವರೆಗೂ ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿ ಸಹಕಾರ ನೀಡಿದ ನಮ್ಮ ಸಮುದಾಯಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಎರಡು ಮೀಸಲು ಕ್ಷೇತ್ರವಿದ್ದು ಒಂದು ಕ್ಷೇತ್ರದಲ್ಲಿ ನಮ್ಮ ಪಕ್ಷದ ಮುಖಂಡರಾದ ಡಾ. ಜಿ ಪರಮೇಶ್ವರ್ ಅವರು ಸ್ಪರ್ಧಿಸುತ್ತಿದ್ದಾರೆ ಇನ್ನು ಮತ್ತೊಂದು ಕ್ಷೇತ್ರ ಪಾವಗಡ ಕ್ಷೇತ್ರವು ಸಹ ಮೀಸಲು ಕ್ಷೇತ್ರವಾಗಿದ್ದು ಪಾವಗಡ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಎಡಗೈ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು ಈಗಾಗಲೇ ಕೆಪಿಸಿಸಿ ಕಚೇರಿಗೆ ಎಡಗೈ ಸಮುದಾಯದಿಂದ ಪಾವಗಡ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿ ಮೂವರು ಅಭ್ಯರ್ಥಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದರು.
ತುಮಕೂರು ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ಮೀಸಲು ಕ್ಷೇತ್ರವಿದ್ದು 1982 ರಿಂದಲೂ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಎಡಗೈ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ ಹಾಗಾಗಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖಂಡರಿಗೂ ಸಹ ಇದಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಲಾಗಿದ್ದು ಅವರು ಸಹ ನಮ್ಮ ಮನವಿಗೆ ಸ್ಪಂದಿಸಿದೆ ಎಂದ ಅವರು ಇನ್ನು ನಮ್ಮ ಸಮುದಾಯದ ಮೇಲೆ ಹಲವರು ಅಪಪ್ರಚಾರ ಸಹ ನಡೆಸುತ್ತಿದ್ದು ಇನ್ನೂ ನಮ್ಮ ಸಮುದಾಯ ಬಿಜೆಪಿ ಪಕ್ಷಕ್ಕೆ ಮತವನ್ನು ನೀಡಲಿದೆ ಎಂದು ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.
ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ನಮ್ಮ ಸಮುದಾಯವು ಸಹ ಮುಖ್ಯವಾಣಿಗೆ ಬರಲು ಸಹಕಾರಿಯಾಗಲಿದೆ ಹಾಗಾಗಿ ಪಾವಗಡ ಕ್ಷೇತ್ರದಿಂದ ಸ್ಪರ್ಧಿಸಲು ಕೋರ್ಟ್ ನರಸಪ್ಪ ಕೆಂಚಮಾರಯ್ಯ ಹಾಗೂ ಡಾಕ್ಟರ್ ಅರುಂಧತಿ ರಂಗಸ್ವಾಮಿ ರವರು ಸಹ ಅರ್ಜಿ ಸಲ್ಲಿಸಿದ್ದು ಮೂವರಲಿ ಯಾರಿಗಾದರೂ ಸಹ ಟಿಕೆಟ್ ನೀಡಿದರೆ ನಮ್ಮ ಸಮುದಾಯದಿಂದ ಬೆಂಬಲಿಸಿ ಚುನಾವಣೆಯಲ್ಲಿ ಗೆಲ್ಲಿಸಿ ಕೊಳ್ಳಲಾಗುವುದು ಎಂದರು.
ಇನ್ನು ನಮ್ಮ ಸಮುದಾಯ ಕಾಂಗ್ರೆಸ್ ಪಕ್ಷಕ್ಕಾಗಿ ಹಲವು ವರ್ಷಗಳಿಂದ ಮತ ನೀಡುತ್ತಿದ್ದು ಮುಂಬರುವ ಚುನಾವಣೆಯಲ್ಲೂ ಸಹ ನಮ್ಮ ಸಮುದಾಯ ಕಾಂಗ್ರೆಸ್ ಪಕ್ಷದ ಪರವಾಗಿ ನಿಲ್ಲಲಿದೆ ಎಂದರು.
ವರದಿ_ ಮಾರುತಿ ಪ್ರಸಾದ್ ತುಮಕೂರು