ಮರಳಿ ಕಾಂಗ್ರೆಸ್ ಗೂಡು ಸೇರಿದ ಕಾಂಗ್ರೆಸ್ ಮುಖಂಡ ಅತಿಕ್ ಅಹಮದ್.

ಮರಳಿ ಕಾಂಗ್ರೆಸ್ ಗೂಡು ಸೇರಿದ ಕಾಂಗ್ರೆಸ್ ಮುಖಂಡ ಅತಿಕ್ ಅಹಮದ್.

 

 

 

ತುಮಕೂರು – ಇತ್ತೀಚೆಗೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಮುಖಂಡ ಅತಿಕ್ ಅಹಮದ್ ರವರು ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಮುನಿಸಿ ಕೊಂಡು ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿ ಜೆಡಿಎಸ್ ಗೂಡು ಸೇರಿದ್ದ ಅತಿಕ್ ಅಹಮದ್ ಇಂದು ಪುನಹ ಮರಳಿ ಕಾಂಗ್ರೆಸ್ ಮನೆಗೆ ಸೇರ್ಪಡೆಯಾಗಿದ್ದಾರೆ.

 

 

 

ಇನ್ನು ಟಿಕೆಟ್ ಕೈತಪ್ಪಲು ಪರಮೇಶ್ವರ್ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಅವರ ಮೇಲೆ ಬೇಸರ ವ್ಯಕ್ತಪಡಿಸಿ ಇತ್ತೀಚಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು ಇನ್ನು ಅತಿಕ್ ಅಹಮದ್ ರವರು ಜೆಡಿಎಸ್ ಸೇರ್ಪಡೆಯಾದ ಬೆನ್ನಲ್ಲೇ ತುಮಕೂರು ಜಿಲ್ಲೆಯ ಹಿರಿಯ ಅಲ್ಪಸಂಖ್ಯಾತರ ಸಮುದಾಯದ ಕಾಂಗ್ರೆಸ್ ಮುಖಂಡ ಶಫಿ ಅಹಮದ್ ರವರು ಸಹ ಜೆಡಿಎಸ್ ಸೇರ್ಪಡೆ ಬಗ್ಗೆ ಚರ್ಚೆ ಮುನ್ನಲೆಗೆ ಬಂದ ಬೆನ್ನಲ್ಲೇ ಆಪರೇಷನ್ ಕಾಂಗ್ರೆಸ್ ಗೆ ಕೈ ಹಾಕಿದ್ದ ಡಾಕ್ಟರ್ ಜಿ ಪರಮೇಶ್ವರ್ ಅವರು ಇಂದು ದಿಡೀರನೆ ಜೆಡಿಎಸ್ ಸೇರಿದ್ದ ಅತಿಕ್ ಅಹಮದ್ ರವರ ಮನೆಗೆ ಬೇಟಿ ನೀಡಿ ಸುದೀರ್ಘ ಚರ್ಚೆ ನಡೆಸುವ ಮೂಲಕ ಪಕ್ಷಕ್ಕೆ ಬರಲು ಮನವಿ ಮಾಡಿದ್ದ ಬೆನ್ನಲ್ಲೇ ಇಂದು ಡಾ. ಜಿ ಪರಮೇಶ್ವರ್ ರವರ ನೇತೃತ್ವದಲ್ಲಿ ತಮ್ಮ ಬೆಂಬಲಿಗರೊಂದಿಗೆ ಅತಿಕ್ ಅಹಮದ್ ರವರು ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ.

 

 

 

ಇನ್ನು ಶಫಿ ಅಹಮದ್ ಹಾಗೂ ಅತಿಕ್ ಅಹಮದ್ ರವರು ದಿಢೀರನೆ ಕಾಂಗ್ರೆಸ್ ಪಕ್ಷವನ್ನ ತೊರೆದು ಜೆಡಿಎಸ್ ಪಕ್ಷಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರು ಸಹ ಒಂಟಿಯಾಗಿ ಅವರು ಸಹ ಏಕಾಂಗಿ ಹೋರಾಟಕ್ಕೆ ಮುಂದಾಗಿದ್ದರು ಇನ್ನು ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದ ಡಾಕ್ಟರ್ ಜಿ ಪರಮೇಶ್ವರ್ ಅವರು ಖುದ್ದಾಗಿ ಅವರೇ ಅಖಾಡಕ್ಕೆ ಇಳಿದು ಅತಿಕ್ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಬರಲು ತಿಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

 

 

 

ಇನ್ನು ಕಾಂಗ್ರೆಸ್ ಪಕ್ಷವನ್ನ ಮರು ಸೇರ್ಪಡೆಯಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಅತಿಕ್ ಅಹಮದ್ ರವರು ಇನ್ನು ನಮ್ಮ ಹಿರಿಯ ಮುಖಂಡರು ಹಾಗೂ ನನ್ನ ರಾಜಕೀಯ ಗುರುಗಳಾದ ಡಾ. ಜಿ ಪರಮೇಶ್ವರ್ ಅವರ ಮೇಲೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಪಕ್ಷವನ್ನು ತೊರೆಯಲು ಮುಂದಾಗಿದ್ದೆ ಆದರೆ ನಾವು ನೀಡಿದ ರಾಜೀನಾಮೆಯನ್ನು ನಮ್ಮ ಪಕ್ಷದ ಮುಖಂಡರು ಅಂಗೀಕರಿಸದೆ ಹಾಗೆಯೇ ಉಳಿಸಿಕೊಂಡಿದ್ದರು ಇಂದು ನನ್ನ ರಾಜಕೀಯ ಗುರುಗಳಾದ ಡಾ ಜಿ ಪರಮೇಶ್ವರ್ ಅವರು ಖುದ್ದಾಗಿ ನಮ್ಮ ಮನೆಗೆ ಭೇಟಿಯ ನೀಡಿ ಪಕ್ಷಕ್ಕೆ ಬರಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರ ಮನವಿಗೆ ಓಗೊಟ್ಟು ನಾನು ಕಾಂಗ್ರೆಸ್ ಪಕ್ಷವನ್ನ ಸೇರ್ಪಡೆಯಾಗಿದ್ದು ತಾವು ಯಾವುದೇ ಶರತ್ತುಗಳನ್ನು ಹಾಕದೆ ಕಾಂಗ್ರೆಸ್ ಪಕ್ಷವನ್ನ ಸೇರ್ಪಡೆಯಾಗಿದ್ದು ತಾವು ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರು ಜೊತೆಗೂಡಿ ಈ ಬಾರಿಯ ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಇಬ್ಬರು ಸೇರಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟವನ್ನ ಹಾರಿಸಲು ಇಬ್ಬರು ಒಗ್ಗೂಡಿ ಕೆಲಸವನ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

 

 

ವರದಿ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!