ಏ.೧೫ರಂದು ಎಡೆಯೂರು ಮಹಾ ರಥೋತ್ಸವ : ಏಕಮುಖ ಸಂಚಾರಕ್ಕೆ ಕ್ರಮಕೈಗೊಳ್ಳಲು ಸೂಚನೆ 

ಏ.೧೫ರಂದು ಎಡೆಯೂರು ಮಹಾ ರಥೋತ್ಸವ : ಏಕಮುಖ ಸಂಚಾರಕ್ಕೆ ಕ್ರಮಕೈಗೊಳ್ಳಲು ಸೂಚನೆ 

 

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಪ್ರಯುಕ್ತ ಏಪ್ರಿಲ್ ೧೫ರಂದು ನಡೆಯಲಿರುವ ಮಹಾ ರಥೋತ್ಸವ ದಿನದಂದು ವಾಹನದ ದಟ್ಟಣೆ ನಿಯಂತ್ರಿಸುವ ಸಲುವಾಗಿ ಏಕ ಮುಖ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

 

 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಎಡೆಯೂರು ಜಾತ್ರೆಯು ಏಪ್ರಿಲ್ ೮ ರಿಂದ ೨೩ರವರೆಗೆ ಜರುಗಲಿದ್ದು, ಈ ಅವಧಿಯಲ್ಲಿ ದೇವಾಲಯದ ಗರ್ಭಗುಡಿಯಲ್ಲಿ ಬಂಗಾರದ ಆಭರಣಗಳ ರಕ್ಷಣೆಗಾಗಿ ಇಬ್ಬರು ಸಶಸ್ತç ಆರಕ್ಷಕ ಸಿಬ್ಬಂದಿ ಹಾಗೂ ಜಾತ್ರಾ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಗತ್ಯ ಆರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

 

 

 

 

 

ಜಾತ್ರಾ ಅವಧಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕ ಆಸ್ಪತ್ರೆ ತೆರೆಯಬೇಕು. ತುರ್ತು ಚಿಕಿತ್ಸಾ ವಾಹನವನ್ನು ಒದಗಿಸುವುದರೊಂದಿಗೆ ಚಿಕಿತ್ಸೆ ನೀಡಲು ಔಷಧಿಯೊಂದಿಗೆ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದರಲ್ಲದೆ, ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲಾಗುವ ಪ್ರಸಾದವನ್ನು ವಿತರಣೆ ಮಾಡುವ ಮುನ್ನ ಆರೋಗ್ಯ ವೈದ್ಯಾಧಿಕಾರಿಗಳು ಆಹಾರ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು.

 

 

 

 

 

ಜಾತ್ರೆ ಸಮಯದಲ್ಲಿ ನಿರಂತರ ೩ ಫೇಸ್ ವಿದ್ಯುತ್ ಸರಬರಾಜು ಮಾಡಲು ಬೆಸ್ಕಾಂ ಇಲಾಖೆಗೆ, ರಥದ ದೃಢತೆ ಬಗ್ಗೆ ದೃಢೀಕರಣ ಪತ್ರ ನೀಡಬೇಕೆಂದು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. ಭಕ್ತಾದಿಗಳ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸ್ಥಳೀಯ ಪಂಚಾಯತಿಗೆ ನಿರ್ದೇಶಿಸಿದರು.

 

 

 

 

ಜಾತ್ರೆಗೆ ಬರುವ ಜಾನುವಾರುಗಳಿಗೆ ಸೋಂಕು ರೋಗಗಳು ಬಾರದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕಿನಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರಲ್ಲದೆ, ಏಪ್ರಿಲ್ ೧೫ ರಂದು ನಡೆಯಲಿರುವ ಮಹಾ ರಥೋತ್ಸವ ಹಾಗೂ ೧೭ ರಂದು ನಡೆಯಲಿರುವ ಬೆಳ್ಳಿ ಪಲ್ಲಕ್ಕಿ ಉತ್ಸವದಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ಸಂಬ೦ಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

 

 

 

ಎಡೆಯೂರು ದೇವಾಲಯದಿಂದ ರಾಷ್ಟಿçÃಯ ಹೆದ್ದಾರಿಯವರೆಗೆ ಎಲ್‌ಇಡಿ ಲೈಟಿಂಗ್ ವ್ಯವಸ್ಥೆ ಹಾಗೂ ಸ್ವಾಗತ ಬೋರ್ಡ್ಗಳನ್ನು ಅಳವಡಿಸಬೇಕೆಂದರಲ್ಲದೆ, ಜಾತ್ರೆ ಅವಧಿಯಲ್ಲಿ ಕುಣಿಗಲ್ ಪುರಸಭೆಯಿಂದ ೨೦ ಸ್ವಚ್ಛತಾ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜಿಸುವ, ಮದ್ಯ ಮಾರಾಟ ಹಾಗೂ ಮಾಂಸದ ಅಂಗಡಿಗಳನ್ನು ತೆರೆಯದಂತೆ ನಿಷೇಧಾದೇಶ ಹೊರಡಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

 

 

 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ., ಮುಜರಾಯಿ ತಹಶೀಲ್ದಾರ್ ಸವಿತಾ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ, ಗಿರೀಶ್ ಬಾಬು ರೆಡ್ಡಿ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎನ್.ಕೃಷ್ಣಪ್ಪ ಹಾಗೂ ಪ್ರಧಾನ ಅರ್ಚಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

 

ಏ.೮ ರಿಂದ ಎಡೆಯೂರು ಜಾತ್ರೆ :- 

ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವವು ಏಪ್ರಿಲ್ ೮ ರಿಂದ ೨೩ರವರೆಗೆ ವಿಜೃಂಭಣೆಯಿ0ದ ಜರುಗಲಿದೆ.

 

 

 

 

 

ಜಾತ್ರೆ ಪ್ರಯುಕ್ತ ಏಪ್ರಿಲ್ ೮ ರಂದು ಹುಲಿವಾಹನೋತ್ಸವ; ೯ರಂದು ಮಹಾಗಣಪತಿ ಪೂಜೆ, ಧ್ವಜಾರೋಹಣ, ಮಹಾರಥಕ್ಕೆ ಕಳಶಾರೋಹಣ, ಪಾಲಕಿ ಉತ್ಸವ, ವೃಷಭ ವಾಹನೋತ್ಸವ, ಕೈಯಡ್ಡೆ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ; ೧೦ರಂದು ವಿಶೇಷ ಪೂಜೆ ಉತ್ಸವಗಳು; ೧೧ರಂದು ನಂದಿ ವಾಹನೋತ್ಸವ; ೧೨ರಂದು ಗಜವಾಹನೋತ್ಸವ, ಬಸವ ವಾಹನೋತ್ಸವ; ೧೩ರಂದು ಫಲಹಾರ ವಿತರಣಾ ಸೇವೆ, ಪುಷ್ಪರಥ; ೧೪ರಂದು ಕ್ಷೀರಾಭಿಷೇಕ, ಹುತ್ತದ ವಾಹನೋತ್ಸವ, ಉಯ್ಯಾಲೋತ್ಸವ, ಚಂದ್ರ ಮಂಡಲೋತ್ಸವ, ಗದ್ದುಗೆಗೆ ಅಷ್ಟೋತ್ತರ ಸೇವೆ, ಪುಷ್ಪಾಲಂಕೃತ ಭೂ ಕೈಲಾಸ ಉತ್ಸವ; ೧೫ರ ಬೆಳಿಗ್ಗೆ ೧೧.೩೦ ಗಂಟೆಗೆ ನಂದಿ ಧ್ವಜಪೂಜೆ, ಮ.೧೨ ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಹರಗುರು ಚರಮೂರ್ತಿಗಳವರಿಂದ ಮಹಾರಥೋತ್ಸವ, ಸಂಜೆ ೫ ಗಂಟೆಗೆ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ ಹಾಗೂ ರಾತ್ರಿ ೧೦ ಗಂಟೆಗೆ ಮುತ್ತಿನ ಪಲ್ಲಕ್ಕಿ ಉತ್ಸವ; ೧೬ರಂದು ಭಿಕ್ಷಾಟನಾ ಲೀಲೆ, ಬಿಲ್ವವೃಕ್ಷ ವಾಹನೋತ್ಸವ; ೧೭ರಂದು ಶೇಷ ವಾಹನೋತ್ಸವ, ಬೆಳ್ಳಿಪಲ್ಲಕ್ಕಿ ಉತ್ಸವ; ೧೮ ರಿಂದ ೨೩ರವರೆಗೆ ವಿವಿಧ ಉತ್ಸವಗಳು ಜರುಗಲಿವೆ.

 

Leave a Reply

Your email address will not be published. Required fields are marked *

You cannot copy content of this page

error: Content is protected !!