ದಲಿತ ಮಹಿಳೆ ಭೀಕರ ಕೊಲೆ: 21 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ತುಮಕೂರು ನ್ಯಾಯಾಲಯ….
ತುಮಕೂರು–ಕೊಪ್ಪಳ ಜಿಲ್ಲೆಯ ಮರಕುಂಬಿಯಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಗೆ ಶಿಕ್ಷೆ ಘೋಷಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಕೂಡ ಇಂತಹುದೇ ಐತಿಹಾಸಿಕ ಮಹತ್ವದ ತೀರ್ಪನ್ನು ಬುಧವಾರ ಪ್ರಕಟಿಸಿದೆ.
2010ರಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿಯ ಗೋಪಾಲಪುರ ಗ್ರಾಮದ ಡಾಬಾ ಹೊನ್ನಮ್ಮ ಅವರನ್ನು ಕಲ್ಲಿನಿಂದ ಹೊಡೆದು ಸಾಯಿಸಿದ್ದ ಪ್ರಕರಣದಲ್ಲಿ 27 ಆರೋಪಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು ಅದರಲ್ಲಿ 6 ಆರೋಪಿಗಳು ಸಾವನ್ನಪ್ಪಿದ್ದಾರೆ.
ಉಳಿದ 21ಆರೋಪಿಗಳ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 3ನೇ ಅಧಿಕ ಸತ್ರ ನ್ಯಾಯಾಲಯ 21 ಮಂದಿಗೆ ದಂಡದೊಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೂರನೇ ಅಧಿಕ ಸಿವಿಲ್ ನ್ಯಾಯಾಧೀಶರಾದ ನಾಗಿರೆಡ್ಡಿ ತೀರ್ಪು ನೀಡಿ ಆದೇಶಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕಿ ಆದ ಜ್ಯೋತಿರವರು ವಾದ ಮಂಡಿಸಿದರು.