ಡಿಸೆಂಬರ್ 2ರ ಸಿಎಂ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ , ಪ್ರತಿಭಟನೆಗೆ ಸಜ್ಜಾಗ ಎನ್.ಡಿ.ಎ ಶಾಸಕರು. 

ಡಿಸೆಂಬರ್ 2ರ ಸಿಎಂ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ , ಪ್ರತಿಭಟನೆಗೆ ಸಜ್ಜಾಗ ಎನ್.ಡಿ.ಎ ಶಾಸಕರು. 

 

 

 

ತುಮಕೂರು — ಡಿಸೆಂಬರ್ 2ರಂದು ತುಮಕೂರು ನಗರದಲ್ಲಿ ಆಯೋಜನೆಗೊಂಡಿರುವ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಪ್ರತಿಭಟನೆ ಬಿಸಿ ತಾಕುವಂತಾಗಿದೆ.

 

 

 

 

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿ, ವಿಪಕ್ಷಗಳ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಾರತಮ್ಯ ಮಾಡುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ ಸುರೇಶ್ ಗೌಡ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 

 

 

 

 

ಕಾರಣ ತಾರತಮ್ಯ ಧೋರಣೆಯನ್ನ ಖಂಡಿಸಿ ಡಿಸೆಂಬರ್ ಎರಡರಂದು ನಗರಕ್ಕೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಕಪ್ಪು ಬಾವುಟ ತೋರಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

 

 

 

 

 

 

ತುಮಕೂರು ನಗರದ ಖಾಸಗಿ ಹೋಟೆಲಲ್ಲಿ ಪತ್ರಿಕಾಗೋಷ್ಠಿ, ಉದ್ದೇಶಿಸಿ ಮಾತನಾಡಿದ ಶಾಸಕ ಬಿ ಸುರೇಶ್ ಗೌಡ ಸೇರಿದಂತೆ ಜಿಲ್ಲೆಯ ಎನ್.ಡಿ.ಎ ಮೈತ್ರಿ ಕೂಟದ ಶಾಸಕರು  ರಸ್ತೆ ಅಭಿವೃದ್ಧಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ಕೋಟಿ ರೂಗಳ ಅನುದಾನವನ್ನ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರೂ ಆದರೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿ ವಿರೋಧಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದೆ ಮುಖ್ಯಮಂತ್ರಿಗಳು ತಾರತಮ್ಯ ಮಾಡುತ್ತಾರೆ ಎಂದು ಆರೋಪಿಸಿದ ಅವರು.

 

 

 

 

 

 

 

ಜಿಲ್ಲೆಯಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಇದುವರೆಗೂ ಅನುದಾನ ಬಿಡುಗಡೆ ಮಾಡಿರುವ ಅವರು ಕುಣಿಗಲ್ ಕ್ಷೇತ್ರಕ್ಕೆ ಅತಿ ಹೆಚ್ಚಿನ ಕೋಟಿ ಅನುದಾನ ನೀಡಿದೆ.ಗುಬ್ಬಿ ತಾಲೂಕಿಗೆ 5 ಕೋಟಿ ತಿಪಟೂರಿಗೆ 10 ಕೋಟಿ ಶಿರಾಕ್ಕೆ 8 ಕೋಟಿ, ಪಾವಗಡಕ್ಕೆ 12 ಕೋಟಿ ಕೊರಟಗೆರೆ ಕ್ಷೇತ್ರಕ್ಕೆ 10 ಕೋಟಿ ಸೇರಿದಂತೆ ಮಧುಗಿರಿ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನ ಬಿಡುಗಡೆ ಮಾಡಲಾಗಿದೆ ಆದರೆ ವಿರೋಧಪಕ್ಷಗಳು ಶಾಸಕರು ಇರುವ ತುಮಕೂರು ಗ್ರಾಮಾಂತರ, ತುಮಕೂರು ನಗರ ,ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ಕ್ಷೇತ್ರಗಳಿಗೆ ಇದುವರೆಗೂ ಬಿಡಿಗಾಸನ್ನು ನೀಡದೆ ತಾರತಮ್ಯ ಹೆಸರಿರುವ ಮುಖ್ಯಮಂತ್ರಿಗಳು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಮುಖ್ಯಮಂತ್ರಿಗಳು ಅಥವಾ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಗಳೋ ಎಂಬುದನ್ನು ಸಾಬೀತುಪಡಿಸಬೇಕಿದೆ ಎಂದು ಆಕ್ರೋಶ ಹೊರ ಹಾಕಿರುವ ಅವರು.

 

 

 

 

 

 

 

 

ಡಿಸೆಂಬರ್ 2ರೊಳಗೆ ಬಾಕಿ ಉಳಿಸಿಕೊಂಡಿರುವ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಬಿಡುಗಡೆ ಮಾಡದೆ ಇದ್ದಲ್ಲಿ ಜಿಲ್ಲೆಯ ಎಲ್ಲಾ ಎನ್.ಡಿ.ಎ ಶಾಸಕರನ್ನ ಒಳಗೊಂಡಂತೆ ತೀವ್ರ ಪ್ರತಿಭಟನೆಯೊಂದಿಗೆ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಕಾರ್ಯಕ್ರಮವನ್ನು ಧಿಕ್ಕರಿಸಿ ಮುಖ್ಯಮಂತ್ರಿಗಳ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ನೀಡಿದ್ದಾರೆ.

 

 

 

 

 

 

 

ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಪ್ರಜಾಪ್ರಭುತ್ವದ ಮೂಲ ಆಶಯವು ಇಂದು ತಿಳಿಯದಿರುವುದು ವಿಷಾದಕರ ಇನ್ನು ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಪಕ್ಷ ಇಡೀ ಭೂಮಂಡಲವನ್ನೇ ಗೆದ್ದಷ್ಟು ಹುಮ್ಮಸ್ಸಿನಲ್ಲಿ ಇದೆ ಇದಕ್ಕೆ ತಕ್ಕ ಪ್ರತ್ಯುತ್ತವರನ್ನು ಮುಂದಿನ ದಿನದಲ್ಲಿ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

 

 

 

 

 

 

 

ಪತ್ರಿಕಾಗೋಷ್ಠಿಯಲ್ಲಿ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ, ತುಮಕೂರು ನಗರ ಶಾಸಕ ಜಿ ಬಿ ಜ್ಯೋತಿ ಗಣೇಶ್, ಗುಬ್ಬಿ ಜೆಡಿಎಸ್ ನಾಯಕ ನಾಗರಾಜು, ದಿಲೀಪ್ , ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಕುಮಾರ್, ಪ್ರಭಾಕರ್ ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!