ಬಂಜೆತನ ಎಂಬುಂದು ಒಂದು ಶಾಪವಲ್ಲ: ಡಾ.ಎಂ.ಆರ್.ಹುಲಿನಾಯ್ಕರ್

ತುಮಕೂರು: ಇತ್ತೀಚಿನ ದಿನಗಳಲ್ಲಿ ಕ್ಲಿಷ್ಟಕರ ಬಂಜೆತನ ಎಂಬುದು ಒಂದು ಸಾಮಾಜಿಕ ಪಿಡುಗು ಇದರಿಂದ ಮಕ್ಕಳಿಲ್ಲದ ದಂಪತಿಗಳಿಗೆ ವೈಯಕ್ತಿಕ ಹಾಗೂ ಮಾನಸಿಕ ಹಿಂಸೆ ಆಗುತ್ತದೆ. ಬಂಜೆತನಕ್ಕೆ ಹತ್ತು ಹಲವು ಕಾರಣಗಳಿದ್ದ ಅಂತಹ ಕಾರಣ ಗಳನ್ನು ಕಂಡು ಹಿಡಿದು ಸೂಕ್ತ ಚಿಕಿತ್ಸೆ ನೀಡಿದಲ್ಲಿ ಬಂಜೆತನ ನಿವಾರಣೆ ಮಾಡಲು ಅನುಕೂಲಕರವಾಗಿರುತ್ತದೆ ಇಂತಹ ವೈದ್ಯಕೀಯ ಮುಂದುವರಿಕೆ ಶಿಕ್ಷಣ ತುಂಬಾ ಪ್ರಯೋಜನಕರವಾಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀದೇವಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‌ರವರು ತಿಳಿಸಿದರು.
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಿಂದ ಕಿಷ್ಟಕರ ಬಂಜೆತನ ನಿವಾರಣೆ ಬಗ್ಗೆ ಸಿ.ಎಂ.ಇ. ಕಾರ್ಯಾಗಾರವನ್ನು ಶ್ರೀದೇವಿ ಆಸ್ಪತ್ರೆಯ ಸಭಾಂಗಣ ದಲ್ಲಿ ಮಾ.೨೬ ರಂದು ಮಧ್ಯಾಹ್ನ ೨ ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಆಧುನಿಕ ವೈದ್ಯಕೀಯ ಕ್ಷೇತ್ರದಲ್ಲಿ ಬಂಜೆತನದ ಕಾರಣಗಳು ಮತ್ತು ಸೂಕ್ತ ಚಿಕಿತ್ಸೆ ಲಭ್ಯವಿರುತ್ತದೆ. ಆ ಸಂಬಂಧವಾಗಿ ನುರಿತ ವೈದ್ಯರ ತಂಡ ನಮ್ಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು ಬಂಜೆತನ ದೂರಮಾಡಿಕೊಳ್ಳಲು ಅತಂಹ ದಂಪತಿಗಳು ಈ ಪ್ರಯೋಜನ ಪಡೆಯಬಹುದು, ನಮ್ಮ ಸಂಸ್ಥೆಯಲ್ಲಿ ಆತ್ಯಾಧುನಿಕ ಉಪಕರಣ ಗಳನ್ನು ಬಳಸಿಕೊಂಡು ಬಂಜೆತನ ಕಾರಣವನ್ನು ಕಂಡು ಹಿಡಿಯುವಲ್ಲಿ ನುರಿತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕರಾದ ಡಾ. ರಮಣ್ ಎಂ. ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್‌ರವರು ಕಾರ್ಯಾಗಾರಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀದೇವಿ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ಹೆಚ್.ಭವಾನಿರವರು ಮಾತನಾಡುತ್ತಾ ಬಂಜೆತನ ಹಾಗೂ ಸಮಾಜದಲ್ಲಿ ಬಂಜೆತನ ನಿವಾರಣೆಗೆ ಇರುವ ಕ್ರಮಗಳ ಬಗ್ಗೆ ವಿವರವಾಗಿ ವೈಜ್ಞಾನಿಕ ವಿಷಯಗಳನ್ನು ಮಂಡಿಸಿದ್ದರು. ಕ್ಲಿಷ್ಟಕರ ಬಂಜೆತನ ನಿವಾರಣೆ ಮತ್ತು ಚಿಕಿತ್ಸಾ ಕ್ರಮಗಳ ಕಾರ್ಯಾಗಾರವನ್ನು ಆಯೋಜಿಸ ಲಾಗಿತ್ತು. ಈ ಕಾರ್ಯಾಗಾರದಲ್ಲಿ ಕ್ಲಿಷ್ಟಕರ ಬಂಜೆತನಕ್ಕೆ ಇರುವ ವಿವಿಧ ಕಾರಣಗಳು ಹಾಗೂ ಈ ಕಾರಣಗಳಿಗೆ ನಿವಾರಣೆಗಳು ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು. ಶ್ರೀದೇವಿ ಆಸ್ಪತ್ರೆಯಲ್ಲಿ ಬಂಜೆತನ ನಿವಾರಣೆಗಾಗಿ ವಿಶೇಷ ಘಟಕವನ್ನು ತೆರೆಯಲಾಗಿದೆ. ಇದರ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆಯಬಹುದು ಎಂದರು. ತುಮಕೂರು ಜಿಲ್ಲೆಯ ವಿವಿಧ ಭಾಗದ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು, ವೈದ್ಯಕೀಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಿರಿಯ ಸ್ತ್ರೀರೋಗ ಸಲಹೆಗಾರರಾದ ಡಾ.ಮಹೇಶ್ ಕೋರೆಗೋಲ್‌ರವರು ಮಾತನಾಡುತ್ತಾ ಬಂಜೆತನ ನಿವಾರಣೆಯನ್ನು ಗುರುತಿಸುವ ಕ್ರಮಗಳು, ಮತ್ತು ನೂತನ ಆವಿಷ್ಕಾರಗಳು ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸ್ವವಿವರವಾಗಿ ವಿಷಯವನ್ನು ಮಂಡಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಡಿ.ಕೆ.ಮಹಾಬಾಲರಾಜು, ಉಪಪ್ರಾಂಶುಪಾಲರು ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ವೈದ್ಯರಾದ ಡಾ.ರೇಖಾಗುರುಮೂರ್ತಿ, ನಗರದ ಹಿರಿಯ ತಜ್ಞರಾದ ಡಾ.ದುರ್ಗಾದಾಸ್ ಅರಸಣ್ಣ, ಡಾ.ನಾಗೇಶ್ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಸಿಬ್ಬಂದಿ ವರ್ಗ, ವಿದ್ಯಾರ್ಥಿ- ವಿದ್ಯಾರ್ಥಿ ನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!