ಮಂಗಳೂರು ನಗರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ದೈಹಿಕ ಸಾಮರ್ಥ್ಯ ಬಲವರ್ಧನೆ ಹಾಗೂ ಸದೃಢತೆಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪೊಲೀಸ್ ಕಮಿಷನರ್ ಹಾಗೂ ಇತರೆ ಅಧಿಕಾರಿಗಳು ಲುಂಗಿ ಡ್ಯಾನ್ಸ್ ಹಾಡಿಗೆ ನೃತ್ಯ ಮಾಡಿ ಎಲ್ಲರಲ್ಲೂ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಂಗಳೂರು ಕಮಿಷನರ್ ಅವರು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದು ವಿಶೇಷವಾಗಿದೆ. ಆದರೆ ಇದೇ ಸಂದರ್ಭದಲ್ಲಿ ಯಾವುದೇ ಮಾಸ್ಕ್ ಹಾಕದೆ ನೃತ್ಯ ಮಾಡುವ ಮೂಲಕ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಇದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.ನಿಯಮಗಳು ಜನಸಾಮಾನ್ಯರಿಗೆ ಮಾತ್ರವೇ ಕಾನೂನು ಪಾಲಕರಿಗೆ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿದೆ.