ಬೆಂಗಳೂರಿನಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ ಮಾಡಲಾಗುವುದು. ಈ ತಿಂಗಳ 20 ರಂದು ಮತ್ತೊಮ್ಮೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಹೇಳಿದ್ದಾರೆ.
ತಮ್ಮ ನಿವಾಸದಲ್ಲಿಂದು ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಬಳಿಕ ಸಿಎಂ ಬಿಎಸ್ ವೈ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ಪರಿಸ್ಥಿತಿ ಅವಲೋಕನ ಮಾಡಲಾಗಿದೆ. ಈಗ ಇರುವಂತೆ ಏ.20 ರವರೆಗೆ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ. ಸರ್ವಪಕ್ಷ ಸಭೆ, ತಜ್ಞರು, ವೈದ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಕೊರೊನಾ ಚೈನ್ ಬ್ರೇಕ್ ಮಾಡಲು ಲಾಕ್ ಡೌನ್ ಅನಿವಾರ್ಯ ಅನ್ನುವ ತಜ್ಞರ ಸಮಿತಿಯ ವರದಿಗೆ ಸಿ ಎಂ ಯಡಿಯೂರಪ್ಪ ಸಹಮತ ವ್ಯಕ್ತಪಡಿಸಿದರು ಅನ್ನಲಾಗಿದೆ. ಕನಿಷ್ಠ 15 ದಿನ ಲಾಕ್ ಡೌನ್ ಹೇರುವ ಸಿದ್ಧತೆಯಲ್ಲಿ ರಾಜ್ಯ ಸರಕಾರವಿದೆ. ಈ ಬಗ್ಗೆ ಸರ್ವ ಪಕ್ಷ ಸಭೆ, ಏಪ್ರಿಲ್ 20 ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.