ಸಿದ್ದಗಂಗಾ ಮಠ ಕೋವಿಡ್ ಕೇರ್ ಸೆಂಟರ್‌ಗೆ ಚಾಲನೆ.

 

 

 

ತುಮಕೂರು ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಳಕಳಿಗಾಗಿ ಸಿದ್ಧಗಂಗಾ ಮಠದ ವತಿಯಿಂದ ಸಿದ್ಧಗಂಗಾ ಆಸ್ಪತ್ರೆ ಸಹಯೋಗದೊಂದಿಗೆ ಆರಂಭಿಸಲಾದ ಶ್ರೀ ಸಿದ್ಧಗಂಗಾ ಮಠ ಕೋವಿಡ್ ಕೇರ್ ಸೆಂಟರ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಯವರು ಹಾಗೂ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.

ಸದರಿ ಕೋವಿಡ್ ಕೇರ್ ಸೆಂಟರ್‌ನ್ನು ಸಿದ್ಧಗಂಗಾ ಮಠದ ಮುಖ್ಯರಸ್ತೆಯಲ್ಲಿರುವ ಯಾತ್ರಿ ನಿವಾಸದಲ್ಲಿ ತೆರೆಯಲಾಗಿದ್ದು, 80 ಹಾಸಿಗೆಯುಳ್ಳದ್ದಾಗಿದೆ. ಜಿಲ್ಲಾ ಆಸ್ಪತ್ರೆಯಿಂದ ಸೂಚಿತಗೊಳ್ಳುವ ಕೋವಿಡ್ ಸೋಂಕಿತರಿಗೆ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ನೀಡಲಾಗುವ ಊಟ, ಔಷಧಿ ಸೇರಿದಂತೆ ಪ್ರತಿಯೊಂದು ಸೌಲಭ್ಯವೂ ಉಚಿತವಾಗಿರಲಿದೆ. ಜತೆಗೆ ತುರ್ತು ಸಂದರ್ಭದಲ್ಲಿ ಬಳಕೆಯಾಗುವಂತೆ ಸೀಮಿತ ಆಕ್ಸಿಜನ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಇಂದಿನಿಂದಲೇ ಸೋಂಕಿತರಿಗೆ ಲಭ್ಯವಾಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿ.ಪಂ. ಸಿಇಓ ಡಾ.ಕೆ.ವಿದ್ಯಾಕುಮಾರಿ, ಡಿಹೆಚ್‌ಓ ಡಾ. ನಾಗೇಂದ್ರಪ್ಪ, ಉಪವಿಭಾಗಾಧಿಕಾರಿ ಅಜಯ್, ಸಿದ್ಧಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಸಿದ್ಧಗಂಗಾ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಟಿ.ಕೆ. ನಂಜುಂಡಪ್ಪ, ಸಿಇಓ ಶಿವಕುಮಾರಯ್ಯ, ಸಿದ್ಧಗಂಗಾ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!