ತುಮಕೂರಿನ ರಿಂಗ್ ರಸ್ತೆಯಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ದಾಖಲಾಗಿರುವ ರೋಗಿಗಳಿಗೆ ಆಕ್ಸಿಜನ್ ಕೊರತೆ ಉಂಟಾಗಿದೆ ಕೂಡಲೇ ಆಕ್ಸಿಜನ್ ವ್ಯವಸ್ಥೆ ಬೇಕಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಆಕ್ಸಿಜನ್ ವ್ಯವಸ್ಥೆ ಮಾಡಿ ಎಂದು ರೋಗಿಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಆಸ್ಪತ್ರೆಯಲ್ಲಿ ದಾಖಲಾಗಿರುವ ಭಾಗಶಹ ರೋಗಿಗಳು ಎಲ್ಲರೂ ಕೂಡ ಆಕ್ಸಿಜನ್ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಆಸ್ಪತ್ರೆಯವರು ನಮ್ಮಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಕೂಡಲೇ ಬೇರೆಡೆ ಸ್ಥಳಾಂತರ ಗೊಳ್ಳಿ ಎಂದು ಒತ್ತಡ ಹೇರುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಗಂಭೀರ ಆರೋಪ ಕೇಳಿಬಂದಿದೆ. ಇನ್ನೂ ಆಸ್ಪತ್ರೆಯಲ್ಲಿ ಆಕ್ಸಿಜನ್ ದಾಸ್ತಾನು ತೀರಾ ಕಡಿಮೆ ಎಂದು ರೋಗಿಗಳಿಗೆ ಸಾಕಾಗುವಷ್ಟು ಆಕ್ಸಿಜನ್ ನೀಡಲು ಸಾಧ್ಯವಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಗಳು ರೋಗಿಗಳ ಸಂಬಂಧಿಕರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶ ಗೊಂಡ ಸಾರ್ವಜನಿಕರು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ ಪರಿಶೀಲನೆ. ಇನ್ನು ಸ್ಥಳದಲ್ಲಿ ಆಕ್ಸಿಜನ್ ಕೊರತೆ ನೀಗಿಸಿ ಎಂದು ಸಾರ್ವಜನಿಕರು ಗೋಳಿಡುತ್ತಿದ್ದ ದೃಶ್ಯ ಎಲ್ಲರ ಮನಕಲಕುವಂತಿತ್ತು.