ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ಕೋವಿಡ್ ಸೆಂಟರ್ಗೆ ಚಾಲನೆ

 

 

ತುಮಕೂರು ನಗರದ ರಿಂಗ್ ರಸ್ತೆಯ ಸ್ಟಾರ್ ಪ್ಯಾಲೇಸ್ ಬಳಿ ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹ್ಮದ್ ರವರು ನೂತನವಾಗಿ ಪ್ರಾರಂಭಿಸಿರುವ ಸುಸಜ್ಜಿತ 50 ಬೆಡ್ ಗಳ ಸಲಾಂ ಕೋವಿಡ್ ಕೇರ್ ಸೆಂಟರ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು ಅವರು ಶನಿವಾರ ಸಂಜೆ 4 ಗಂಟೆಯ ಸಮಯಕ್ಕೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರವರೊಂದಿಗೆ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂಬಂಧ ಮಾಡಿಕೊಂಡಿರುವ ವ್ಯವಸ್ಥೆಗಳು ಉಪಕರಣಗಳು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಕೋವಿಡ್ ಕೇರ್ ಸೆಂಟರ್ ಎಲ್ಲಾ ವಾರ್ಡ್ ಗಳಿಗೂ ಭೇಟಿ ನೀಡಿದ ಸಚಿವರು ಕಟ್ಟಡದ ಭೌತಿಕ ಪರಿಸರವನ್ನು ವೀಕ್ಷಿಸಿ ವ್ಯವಸ್ಥೆ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೆಯೇ ಸೋಂಕಿತರಿಗೆ ಉತ್ತಮವಾದ ಚಿಕಿತ್ಸೆ ದೊರಕಲಿ ಎಂದು ಆಶಿಸಿದರು ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಅಹಮದ್ ರವರು ಕೋರೋನಾ ಎರಡನೇ ಅಲೆ ಬಹು ವ್ಯಾಪಕವಾಗಿ ಹರಡಿದ್ದು ಜನರು ಬೆಡ್ ಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದ್ದು ಹಲವು ಜನ ತಮ್ಮ ಪ್ರಾಣವನ್ನು ಕಳೆದುಕೊಂಡ ದೃಶ್ಯವನ್ನು ನಾವೆಲ್ಲ ಕಣ್ಣಾರೆ ನೋಡಿದ್ದೇವೆ ಆದ್ದರಿಂದ ಜನರಿಗೆ ಉತ್ತಮವಾದ ಚಿಕಿತ್ಸೆ ಒದಗಿಸುವ ಕುರಿತು ಆಲೋಚನೆ ನಡೆಸಿ ಜಿಲ್ಲಾಡಳಿತಕ್ಕೆ ಅನುಮತಿಗಾಗಿ ಮನವಿ ಸಲ್ಲಿಸಲಾಗಿತ್ತು .

 

ಅದರ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಕ್ಕೆ ಅನುಮತಿ ನೀಡಿದ್ದಾರೆ. ಕಳೆದ ವರ್ಷದಿಂದಲೇ ತಾವು ಫೀವರ್ ಕ್ಲಿನಿಕ್ ನಡೆಸುತ್ತಿದ್ದು ಅದರ ಜೊತೆಗೆ ಈ ಬಾರಿ ಕಪೊವಿಡ್ ಕೇರ್ ಸೆಂಟರ್ ಸಹ ಪ್ರಾರಂಭ ಮಾಡಿದ್ದು ವೈಲ್ಡ್ ಮತ್ತು ಮಾಡರೇಟ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗೂ ಅದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಈ ನಿಟ್ಟಿನಲ್ಲಿ ಸಾರ್ವಜನಿಕರು ಯಾವುದೇ ಭಯಪಡದೆ ಸೋಂಕು ಧೃಡಪಟ್ಟ ತಕ್ಷಣ ಆಸ್ಪತ್ರೆಗೆ ಬಂದು ಸೂಕ್ತ ಚಿಕಿತ್ಸೆ ಮತ್ತು ಆರೈಕೆ ಪಡೆಯಬೇಕೆಂದು ಮನವಿ ಮಾಡಿದರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಮಾಜಿ ಸಚಿವ ಸೊಗಡು ಶಿವಣ್ಣ ಮಾಜಿ ಮೇಯರ್ ಫರೀದಾ ಬೇಗಂ ಪಾಲಿಕೆ ಸದಸ್ಯ ನಯಾಜ್ ಅಹಮದ್ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!