ಮಾಧ್ಯಮಗಳು ಭಯ ಹುಟ್ಟಿಸುತ್ತಿವೆ ಕ್ರಮ ಕೈಗೊಳ್ಳಿ ಎಂದು ಅರ್ಜಿ; ಚಾನೆಲ್​ ಬದಲಿಸುವ ಆಯ್ಕೆಯೂ ವೀಕ್ಷಕರಿಗಿದೆ ಎಂದ ಹೈಕೋರ್ಟ್

 

ಚಿತಾಗಾರಗಳ ದೃಶ್ಯಗಳನ್ನು ಪ್ರಸಾರ ಮಾಡುವುದರಿಂದ ವೀಕ್ಷಕರಿಗೆ ಮಾನಸಿಕ ಒತ್ತಡವಾಗಿ ಸಾವು ಸಂಭವಿಸಬಹುದು. ಹೀಗಾಗಿ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಕಾಯ್ದೆಯಡಿ ಮಾಧ್ಯಮಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಲೆಟ್ಸ್ ಕಿಟ್ ಫೌಂಡೇಷನ್ ಪಿಐಎಲ್ ಸಲ್ಲಿಸಿತ್ತು

 

ಇದನ್ನು ವಿಚಾರಿಸಿದ ಹೈಕೋರ್ಟ್​ ವಿಭಾಗೀಯ ಪೀಠ ಈ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚನೆ ನೀಡಿದ್ದು, ವೀಕ್ಷಕರಿಗೆ ಚಾನಲ್ ಬದಲಿಸುವ ಆಯ್ಕೆಯೂ ಇದೆ. ಉತ್ತಮವಾದದ್ದನ್ನು ವೀಕ್ಷಿಸಲು ಚಾನಲ್ ಬದಲಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಪಿಐಎಲ್ ಇತ್ಯರ್ಥಪಡಿಸಿದೆ. ಕೊವಿಡ್​ ಆರಂಭವಾದಾಗಿನಿಂದಲೂ ವಾಸ್ತವ ಚಿತ್ರಣವನ್ನು ಕಟ್ಟಿಕೊಡುತ್ತಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಈ ಸಂದರ್ಭದಲ್ಲಿ ಹೈಕೋರ್ಟ್​ ಸದರಿ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದು ಗಮನಾರ್ಹವಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!