ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

 

 

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರ್ಮಾಣವಾದ 150 ಹಾಸಿಗೆಯ ಸುಸಜ್ಜಿತ ಕೋವಿಡ್ ಕೇರ್ ಕೇಂದ್ರವನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿ.ವಿ.ಐ.ಪಿ. ಟರ್ಮಿನಲ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರ್ಚುಯಲ್ ವೇದಿಕೆಯ ಮೂಲಕ ಗ್ರೀನ್ ಕೋ ಸಂಸ್ಥೆಯ ವತಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ಉಪಯೋಗಕ್ಕಾಗಿ 200 ಲಾರ್ಜ್ ಮೆಡಿಕಲ್ ಗ್ರೇಡ್ ನ 10 LPM ‘ಆಕ್ಸಿಜನ್ ಕಾನ್ಸನ್ ಟ್ರೇಟರ್’ಗಳ ಸ್ವೀಕಾರ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ 150 ಬೆಡ್‌ಗಳ ಸುಸಜ್ಜಿತ ಕೋವಿಡ್ ಕೇರ್ ಕೇಂದ್ರವನ್ನು ಉದ್ಘಾಟಿಸಿದರು.

 

ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣಗೊಂಡಿರುವ ಕೋವಿಡ್ ಕೇರ್ ಕೇಂದ್ರದಲ್ಲಿ ಖ್ಯಾತ ವೈದ್ಯಕೀಯ ತಂಡ ಕಾರ್ಯಸಲ್ಲಿಸಲಿದ್ದು, ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಪ್ರತಿಷ್ಠಾನದ ಸಾಮಾಜಿಕ ಕಳಕಳಿ ನಿದರ್ಶನವಾಗಿದೆ ಎಂದರಲ್ಲದೆ, ಗ್ರೀನ್ ಇಂಡಿಯಾ ಸಂಸ್ಥೆ ಹಾಗೂ ಫೆರೆಕ್ಸ್ ಫೈನಾನ್ಸಿಯಲ್ ಹೋಲ್ಡಿಂಗ್ಸ್ ಗ್ರೂಪ್ ಸಹಯೋಗದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನದ ಈ ಕೇಂದ್ರವು ಅಗತ್ಯ ಇರುವವರಿಗೆ ತುರ್ತು ಚಿಕಿತ್ಸೆ ನೆರವಿನ ಹಸ್ತ ಚಾಚಿರುವುದು ಶ್ಲಾಘನೀಯ ಎಂದರು.

 

ಗ್ರೀನ್ ಕೋ ಸಂಸ್ಥೆ ವತಿಯಿಂದ ವಿತರಿಸಲಾದ ಸರ್ಕಾರಿ ಆಸ್ಪತ್ರೆಗಳ ಉಪಯೋಗಕ್ಕಾಗಿ 200 ಲಾರ್ಜ್ ಗ್ರೇಡ್, ಹತ್ತು ಎಲ್.ಪಿ.ಎಂ. ಆಕ್ಸಿಜನ್ ಕಾನ್ಸನ್ ಟ್ರೇಟರ್‌ಗಳನ್ನು ಸ್ವೀಕರಿಸಲಾಗಿದ್ದು, ಇದರಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಒತ್ತಡವು ಕಡಿಮೆಯಾಗಲಿದೆ ಹಾಗೂ ನೂರಾರು ಜನರ ಜೀವ ಉಳಿಸಲು ನೆರವಾಗಲಿದೆ ಎಂದರು.

 

 

ಇದೇ ಸಂಧರ್ಭದಲ್ಲಿ ಮುಖ್ಯ‌ಮಂತ್ರಿಗಳು ಅಗತ್ಯ ಸೇವೆ ಮತ್ತು ಬೆಂಬಲ ನೀಡುತ್ತಿರುವ ಗ್ರೀನ್ ಕೋ ಸಂಸ್ಥೆ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನಕ್ಕೆ ಕೃತಜ್ಞತೆಗಳನ್ನು ತಿಳಿಸಿದರು. ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಕೆ.ಐ.ಎ. ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಿ.ಇ.ಓ. ಹರಿ ಮರಾರ್, ಗ್ರೀನ್ ಕೋ ಗ್ರೂಪ್‌ನ ಸಂಸ್ಥಾಪಕರಾದ ಅನಿಲ್ ಚಲಮಲಶೆಟ್ಟಿ ಹಾಗೂ ಮಹೇಶ್ ಕೊಹ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ. ನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!