ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್ಎಸ್ ದೊರೆಸ್ವಾಮಿ ರವರು ಇಂದು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚಿಗೆ ಅವರಿಗೆ ಕೊರನ ಸೋಂಕು ತಗುಲಿತ್ತು ನಂತರ ಅವರು ಚೇತರಿಸಿಕೊಂಡು ಮನೆಗೆ ಮರಳಿದರು ಆದರೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಕೊನೆ ಕ್ಷಣದಲ್ಲಿ ಹೃದಯಾಘಾತಕ್ಕೆ ಈಡಾಗಿ ನಿಧನರಾಗಿದ್ದಾರೆ.
1918ರಲ್ಲಿ ಕನಕಪುರ ಬಳಿಯ ಹಾರೋಹಳ್ಳಿಯಲ್ಲಿ ಜನಿಸಿದರು. ನಂತರ ಇವರು ಹಲವು ಹೋರಾಟಗಳಲ್ಲಿ ಮುಂಚೂಣಿ ನಾಯಕರಾಗಿ ಹಾಗೂ ಸ್ವತಂತ್ರ ಹೋರಾಟಗಾರರು ಹಲವು ಹೋರಾಟಗಳಲ್ಲಿ ಭಾಗವಹಿಸಿದ್ದರು. ಪತ್ರಿಕೋದ್ಯಮದಲ್ಲೂ ಮುಂಚೂಣಿಯಲ್ಲಿದ್ದರು ನಂತರ ಭೂಕಬಳಿಕೆ ಹೋರಾಟ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗವಹಿಸಿದ ಇವರು ಎಲ್ಲರಿಗೂ ಮಾದರಿಯಾಗಿದ್ದರು.
ಇತ್ತೀಚೆಗೆ ಅವರಿಗೆ ಕೊರೊನಾ ಸೋಂಕು ತಗುಲಿತ್ತು ಆದರೆ 104 ವರ್ಷಗಳ ಇಳಿವಯಸ್ಸಿನಲ್ಲೂ ಕೂಡ ಕೊರನ ಜಯಿಸಿ ಇತ್ತೀಚೆಗೆ ಮನೆಗೆ ಮರಳಿದ್ದರು. ಇವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಹಲವು ಹೋರಾಟಗಳಲ್ಲಿ ಮುಂಚೂಣಿಯಾಗಿ ಇರುತ್ತಿದ್ದ ಎಚ್ಎಸ್ ದೊರೆಸ್ವಾಮಿ ರವರ ನಿದನಕ್ಕೆ ರಾಜ್ಯದ ಅನೇಕ ಗಣ್ಯರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.