ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂ.14ರವರೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಒಂದೇ ಬಾರಿಗೆ ಎಲ್ಲವೂ ತೆರವುಗೊಳಿಸದೆ ಐದು ಹಂತಗಳಲ್ಲಿ ‘ಅನ್ ಲಾಕ್’ ಪ್ರಕ್ರಿಯೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಹೇರಲಾದ ಲಾಕ್ ಡೌನ್ ಜೂನ್ 14ಕ್ಕೆ ಮುಕ್ತಾಯಗೊಳ್ಳಲಿದ್ದು, ನಂತರ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ ಹಂತದಲ್ಲಿ ಖರೀದಿಯ ಅವಧಿ ವಿಸ್ತರಿಸುವ ಚಿಂತನೆ ಇದೆ. ಈಗ ಜಾರಿಗೊಳಿಸಿದ ನಿಯಮಗಳಲ್ಲಿ ಬದಲಾವಣೆ ಮಾಡಲಾಗುವುದು, ಬೆಳಿಗ್ಗೆ 6 ರಿಂದ 10ರ ಬದಲಾಗಿ 12 ಗಂಟೆಯವರೆಗೆ ವಿಸ್ತರಿಸುವ ಚಿಂತನೆ ಇದೆ ಎಂದಿದ್ದಾರೆ.
ಪಾರ್ಕ್ ಗಳಲ್ಲಿ ವಾಕಿಂಗ್ ಮಾಡುವುದಕ್ಕೆ ಅವಕಾಶ ನೀಡಬಹುದು. ಹೀಗಾಗಿ ಮೊದಲ ಹಂತದಲ್ಲಿಯೇ ಪಾರ್ಕ್ ನಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡುವ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದಾಗಿ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.