ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ವಿದ್ಯಾರ್ಥಿಗಳಿಗೆ ಡಿಜಿಟಲ್ ಕ್ಲಾಸ್ರೂಮ್ ಕಲಿಕೆ ಅಂಗವಾಗಿ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ರೀತಿಯಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಸ್ಮಾರ್ಟ್ ಕ್ಲಾಸ್ ರೂಮ್ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಕಾರ್ಯಕ್ರಮದ ಅಂಗವಾಗಿ ಶಿರಾ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಕ್ಲಾಸ್ರೂಮ್ ಅನ್ನು ವಿಧಾನ ಪರಿಷತ್ ಶಾಸಕ ಚಿದಾನಂದ ಎಂ ಗೌಡ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ಗೌಡರವರು ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಇಂತಹ ಡಿಜಿಟಲ್ ಕ್ಲಾಸ್ರೂಮ್ ಸಾಕಷ್ಟು ಸಹಕಾರಿಯಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಶಾಸಕ ಚಿದಾನಂದ ಗೌಡರು ರಾಜ್ಯ ಸರ್ಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಡಿಜಿಟಲ್ ಕಲಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿದೆ . ಖಾಸಗಿ ಶಿಕ್ಷಣ ಸಂಸ್ಥೆಗಳು ಡಿಜಿಟಲ್ ಕ್ಲಾಸ್ರೂಮ್ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ .ಸರ್ಕಾರಿ ಕಾಲೇಜುಗಳಲ್ಲಿ ಇಂತಹ ವ್ಯವಸ್ಥೆ ಸರಿಯಾದ ರೀತಿಯಲ್ಲಿ ಬಳಸಿಕೊಂಡಿದ್ದೆ ಅದಲ್ಲಿ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು ಮತ್ತಷ್ಟು ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ , ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಉಪನ್ಯಾಸಕ ವೃಂದ ಸಾಕಷ್ಟು ಶ್ರಮವಹಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದರು. ಅದರ ಮುಂದುವರಿದ ಭಾಗವಾಗಿ ಇಂತಹ ಸ್ಮಾರ್ಟ್ ಕ್ಲಾಸ್ ರೂಂ ಗಳಿಂದ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಇಬ್ಬರಿಗೂ ಬೋಧನೆ ಹಾಗೂ ಕಲಿಕೆಗೆ ಮತ್ತಷ್ಟು ಅನುಕೂಲವಾಗಲಿದೆ ಇದರ ಮೂಲಕ ಶಿಕ್ಷಣ ವ್ಯವಸ್ಥೆ ಮತ್ತಷ್ಟು ಮೇಲ್ದರ್ಜೆಗೇರಲು ಸಹಕಾರಿಯಾಗಲಿದೆ ಎಂದರು .
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಿದಾನಂದಗೌಡ ರವರು ಟ್ಯಾಬ್ಲೆಟ್ ಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಸಿರಾ ತಹಸೀಲ್ದಾರ್ ಮಮತಾ ಕಾಲೇಜು ಪ್ರಾಂಶುಪಾಲರಾದ ವೇಣುಗೋಪಾಲ್, ಕಾಲೇಜು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು