ದೇವನಹಳ್ಳಿ: ನಾಡ ಪ್ರಭು ಕೆಂಪೇಗೌಡರ ಇತಿಹಾಸವನ್ನು ಪ್ರತಿ ಯುವ ಪೀಳಿಗೆಗೆ ತಿಳಿಸಿಕೊಡಬೇಕು. ಅವರು ನಡೆದು ಬಂದ ದಾರಿ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್ ತಿಳಿಸಿದರು.
ದೇವನಹಳ್ಳಿಯ ಕೆಂಪೇಗೌಡ ವೃತ್ತದಲ್ಲಿ ನಾಡ ಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಕೆಂಪೇಗೌಡರ ವಂಶಸ್ಥರು ಮೊದಲು ಬಂದು ನೆಲೆಸಿದ್ದು, ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಲ್ಲಿ ಅವರ ವಂಶಸ್ಥರು ನಾಲ್ಕು ದಿಕ್ಕಿನಲ್ಲಿ ಪಸರಿಸಿ, ನಾಡ ಕಟ್ಟುವ ಕೆಲಸದಲ್ಲಿ ತೊಡಗಿಕೊಂಡು ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಕೆರೆ-ಕುಂಟೆಗಳ ಅಭಿವೃದ್ಧಿ, ದೇವಾಲಯಗಳ ಜೀರ್ಣೋದ್ಧಾರ, ಇಗೀನ ಬೆಂಗಳೂರು ಅಭಿವೃದ್ಧಿ ಕಾಣಲು ಅಡಿಪಾಯ ಹಾಕಿ ಪೇಟೆಗಳನ್ನು ನಿರ್ಮಿಸಿದ ಕೀರ್ತಿ ಅವರದ್ದು, ಇಂತಹ ಹಲವಾರು ಸಂಗತಿಗಳು ನಮ್ಮ ಮಕ್ಕಳಿಗೆ ತಿಳಿಸಿಕೊಡಬೇಕು. ಇವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸುವಂತೆ ಸಲಹೆ ಮಾರ್ಗದರ್ಶನ ನೀಡಬೇಕು ಎಂದರು.
ಕಾಂಗ್ರೆಸ್ ಮುಖಂಡ ಸಾವಕನಹಳ್ಳಿ ಎಸ್.ಪಿ.ಮುನಿರಾಜ್ ಮಾತನಾಡಿ, ನಮ್ಮ ಗ್ರಾಮಾಂತರ ಜಿಲ್ಲೆಗೆ ಕೆಂಪೇಗೌಡ ಜಿಲ್ಲೆಯನ್ನಾಗಿಸಬೇಕು. ಕನ್ನಡ ನಾಡ ಪ್ರಭು ಎಂದೇ ಹೆಸರು ವಾಸಿಯಾಗಿರುವ ಕೇಂಪೆಗೌಡರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಬಾರದು, ಬದಲಿಗೆ ಸಮಾಜದ ಎಲ್ಲಾ ಸಮುದಾಯದವರಿಗೂ ಮಾದರಿಯಾಗಿದ್ದಾರೆ. ಕೆಂಪೇಗೌಡರು ಹಲವಾರು ಜನಪರ ಕಾರ್ಯಗಳನ್ನು ಕಾರ್ಯಗತಗೊಳಿಸುವುದರ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಈ ವೇಳೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅರ್ಶಿಗೌಡ, ಪ್ರದೀಪ್, ಮತ್ತಿತರರು ಇದ್ದರು.
ಗುರುಮೂರ್ತಿ ಬೂದಿಗೆರೆ
8861100990