ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಕ್ಕೆ ತೆರೆ: ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಮುಂದುವರಿಕೆ

 

ನಲಪಾಡ್-ರಕ್ಷಾ ರಾಮಯ್ಯ ನಡುವಿನ ಹಗ್ಗಜಗ್ಗಾಟಕ್ಕೆ ಫುಲ್ ಸ್ಟಾಪ್

 

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲಿನ ಅಂತೆಕಂತೆಗಳ ಸುದ್ದಿಗೆ ಇಂಡಿಯನ್ ಯೂತ್ ಕಾಂಗ್ರೆಸ್ ಬ್ರೇಕ್ ಹಾಕಿದೆ.

 

ಕರ್ನಾಟಕ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ಎಂದು ಇಂಡಿಯನ್ ಯೂತ್ ಕಾಂಗ್ರೆಸ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಈ ಮೂಲಕ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ನಲಪಾಡ್ ಗೆ ತೀವ್ರ ಹಿನ್ನಡೆಯಾಗಿದೆ.

 

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಲಪಾಡ್ ಮತ್ತು ರಕ್ಷಾ ರಾಮಯ್ಯ ನಡುವೆ ಸಾಕಷ್ಟು ಘರ್ಷಣೆಯಾಗಿತ್ತು. ಇದರ ನಡುವೆ ಈ ವಿಚಾರವಾಗಿ ಯಾರನ್ನು ಆಯ್ಕೆ ಮಾಡಬೇಕೆಂದು ನಿನ್ನೆ ತಡರಾತ್ರಿವರೆಗೆ ಡಿಕೆ ಶಿವಕುಮಾರ್ ಅವರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ಐವೈಸಿ ಅಧ್ಯಕ್ಷರ ಘೋಷಣೆ ಮಾಡಿ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!