ನಗರದ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ _ಪಾಲಿಕೆ ವಿರೋಧ ಪಕ್ಷದ ನಾಯಕರಾದ ಜೆ ಕುಮಾರ್.

 

 

ತುಮಕೂರು ನಗರ ಬೆಂಗಳೂರಿಗೆ ಸಮೀಪವಿರುವ ನಗರವಾಗಿದ್ದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ತುಮಕೂರು ನಗರ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದೆ ಆದರೆ ತುಮಕೂರು ನಗರದಲ್ಲಿ ಹಲವು ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಿದ್ದುಅವುಗಳನ್ನು ಹಂತಹಂತವಾಗಿ ಬಗೆಹರಿಸಲು ಶ್ರಮಿಸುವುದಾಗಿ ತುಮಕೂರು ಮಹಾನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕರಾದ ಜೆ ಕುಮಾರ್ ಅವರು ತಿಳಿಸಿದ್ದಾರೆ.

 

ತುಮಕೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಅವರ ನೂತನ ವಿರೋಧ ಪಕ್ಷದ ನಾಯಕರ ಕಚೇರಿಯನ್ನು ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಇಂದಿನಿಂದ ನನಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿದ್ದು ತುಮಕೂರು ನಗರದ ಸಮಗ್ರ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಗಮನಹರಿಸಲಾಗುವುದು ಮುಂದಿನ ದಿನಗಳಲ್ಲಿ 35 ವಾರ್ಡ್ ಗಳನ್ನು ಸಂಚರಿಸಿ ಜನರ ಅಭಿಪ್ರಾಯವನ್ನು ಸಂಗ್ರಹಿಸಿ ಈಗಿರುವ ಅವ್ಯವಸ್ಥೆಯನ್ನು ಹೋಗಲಾಡಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ.

 

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಆಯ್ಕೆಯಾಗಿರುವ ತುಮಕೂರು ಮಹಾನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕರಾದ ಜೆ. ಕುಮಾರ್ ರವರ ನೂತನ ಕಚೇರಿಗೆ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಶಾಸಕರಾದ ಡಾ. ಜಿ ಪರಮೇಶ್ವರ್, ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ ಎನ್ ರಾಜಣ್ಣ, ತುಮಕೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಕೃಷ್ಣಪ್ಪ, ಗುಬ್ಬಿ ಶಾಸಕರಾದ ಎಸ್ ಆರ್ ಶ್ರೀನಿವಾಸ್, ತುಮಕೂರು ನಗರ ಶಾಸಕರಾದ ಜ್ಯೋತಿ ಗಣೇಶ್ , ಮಾಜಿ ಶಾಸಕರಾದ ರಫೀಕ್ ಅಹ್ಮದ್, ಶಫಿ ಅಹಮದ್ ಸೇರಿದಂತೆ ಹಲವು ನಾಯಕರು ಕಚೇರಿಗೆ ಭೇಟಿ ನೀಡಿ ಶುಭಕೋರಿದರು.

 

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಬೆಳ್ಳಿ ಲೋಕೇಶ್, ಪಾಲಿಕೆಯ ಸದಸ್ಯರಾದ ಮಂಜುನಾಥ್, ಪಾಲಿಕೆಯ ಮಾಜಿ ಹಾಗೂ ಹಾಲಿ ಸದಸ್ಯರು ಹಾಗೂ ಮುಖಂಡರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!