ಎಸ್ ಎಸ್ ಎಲ್ ಸಿ ಪರೀಕ್ಷೆ ಸಕಲ ಸಿದ್ಧತೆ, 8 ಲಕ್ಷ 76 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ : ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ರಾಜ್ಯದ 2021 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜುಲೈ19 ಮತ್ತು 22 ನಡೆಯಲಿದೆ ರಾಜ್ಯದಲ್ಲಿ ಸುಮಾರು 8 ಲಕ್ಷ 76 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ.

 

ಕಳೆದ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ್ದೇವೆ. ಅದೇ ಮಾದರಿಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ.

ಪರೀಕ್ಷೆ ನಡೆಸುವುದನ್ನು ರಾಜ್ಯ ಸರ್ಕಾರ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿಲ್ಲ.

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಪರೀಕ್ಷೆ ನಡೆಸಲಾಗುತ್ತಿದೆ.

 

ಎಸ್ ಎಸ್ ಎಲ್ ಸಿ ನಂತರ ಪಿಯುಸಿ ಯಲ್ಲಿ ಯಾವ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆ ನಡೆಸುವ ಸಂಬಂಧ ಈ ವಾರವೇ ಎಲ್ಲಾ ಜಿಲ್ಲೆಗಳ ಡಿಡಿಪಿಐ ಮತ್ತು ಬಿಇಒ ಗಳ ಸಭೆ ನಡೆಸಲಾಗುವುದು.

 

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಇರುವ ಗೊಂದಲ, ಅನುಮಾನಗಳನ್ನು ಹೋಗಲಾಡಿಸಲಾಗುವುದು.

ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಈಗಾಗಲೇ ಎರಡು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಲಾಗಿದೆ.

 

ಈ ಮೂಲಕ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ 8 ಲಕ್ಷ 76 ಸಾವಿರದ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ.

ಇಷ್ಟೊಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಸವಾಲಿನ ಕೆಲಸವಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಕಳೆದ ಬಾರಿಯಂತೆ ಸುಸೂತ್ರವಾಗಿ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ ಸಚಿವ ಸುರೇಶ್ ಕುಮಾರ್ ಹೇಳಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!