ಆಗಸ್ಟ್ ೧೪ರಂದು ಮೆಗಾ ಲೋಕ್ ಅದಾಲತ್

ತುಮಕೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಆಗಸ್ಟ್ ೧೪ರಂದು ಮೆಗಾ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್. ಸಂಗ್ರೇಶಿ ಅವರು ತಿಳಿಸಿದರು.

ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಹೊಸ ನ್ಯಾಯಾಲಯದ ಕಟ್ಟಡದಲ್ಲಿಂದು ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದ್ದು, ಈ ಜನತಾ ನ್ಯಾಯಾಲಯಗಳಲ್ಲಿ ಆಗಸ್ಟ್ ೧೪ರಂದು ಮೆಗಾ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ. ಲೋಕ್ ಅದಾಲತ್‌ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಲೋಕ್ ಅದಾಲತ್‌ನಲ್ಲಿ ಅತೀ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಜಿಲ್ಲೆಯಾದ್ಯಂತ ಆಗಸ್ಟ್ ೧೪ರಂದು ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ಮೆಗಾ ಲೋಕ್ ಆದಾಲತ್‌ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ಈ ಅದಾಲತ್‌ನ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ ಸೇರಿದಂತೆ ಕಾರ್ಮಿಕ ವಿವಾದ ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬoಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಇತರೆ (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಹಾಗೂ ಇತರೆ ಸಿವಿಲ್ ಪ್ರಕರಣಗಳು) ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು.

ಅಲ್ಲದೆ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಹುದಾದ ಅಪರಾಧಿಕ ಪ್ರಕರಣ, ಚೆಕ್ಕು ಅಮಾನ್ಯ, ಬ್ಯಾಂಕ್, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬoಧಿಸಿದ ಕ್ಲೇಮಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ / ಕುಟುಂಬ ನ್ಯಾಯಾಲಯ ಪ್ರಕರಣ(ವಿಚ್ಛೇದನ ಪ್ರಕರಣ ಹೊರತುಪಡಿಸಿ)ಗಳು, ಭೂಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬoಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ, ಕಂದಾಯ ಪ್ರಕರಣಗಳು(ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ), ಸಿವಿಲ್ ಪ್ರಕರಣ(ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು)ಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ಒಪ್ಪಿಗೆಯಾದಲ್ಲಿ ಮಾತ್ರ ನೀವು ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊoದು ವಿಶೇಷ ಅವಕಾಶವಾಗಿದೆ ಎಂದು ಅವರು ತಿಳಿಸಿದರು.

 

ಜಿಲ್ಲೆಯಲ್ಲಿ ಒಟ್ಟು ೯,೨೮೯ ವಿಭಾಗ ದಾವೆಗಳು ವಿಚಾರಣಾ ಹಂತದಲ್ಲಿದಲ್ಲಿದ್ದು, ಸರ್ವೊಚ್ಛ ನ್ಯಾಯಾಲಯದ ಐತಿಹಾಸಿಕ ತೀರ್ಪಿನನ್ವಯ ಹಿಂದೂ ಅವಿಭಕ್ತ ಕುಟುಂಬದಲ್ಲಿ ದಾಯಾದಿಯ ಮಗಳು, ಒಬ್ಬ ಮಗನ ರೀತಿಯಲ್ಲಿಯೇ ಹುಟ್ಟಿನಿಂದಲೇ ದಾಯಾದಿ ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಹೊಣೆಗಾರಿಕೆ ಹೊಂದುತ್ತಾಳೆoದು ಆದೇಶವಾಗಿರುವುದರಿಂದ ವಿಭಾಗ ದಾವೆಗಳನ್ನು ಶೀಘ್ರದಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದರು.

ಕೋವಿಡ್-೧೯ ಸಾಂಕ್ರಾಮಿಕದ ಕಾರಣ ರಾಜೀ ಮಾತುಕತೆಯನ್ನು ಎಲೆಕ್ಟಾçನಿಕ್ ವಿಧಾನಗಳಾದ ಆನ್‌ಲೈನ್ ವಿಡಿಯೋ ಕಾನ್ಫರೆನ್ಸ್, ಎಲೆಕ್ಟಾçನಿಕ್ಸ್ ಮೋಡ್, ವಾಟ್ಸ್ಆಪ್ ಮೂಲಕವೂ ಪ್ರಕರಣ ಇತ್ಯರ್ಥ ಮಾಡಲಾಗುವುದರಿಂದ ಪ್ರಾಧಿಕಾರ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಇ-ಮೇಲ್/ ಎಸ್.ಎಮ್.ಎಸ್./ಖುದ್ದು ಹಾಗರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ವಕೀಲರ ಸಂಘದ ಅಧ್ಯಕ್ಷ ದೊಡ್ಡಮನೆ ಗೋಪಾಲಗೌಡ, ಕಾರ್ಯದರ್ಶಿ ಹಿಮಾನಂದ ಡಿ.ಸಿ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!