ತುಮಕೂರು ಜನತೆಯ ಮಹತ್ವಾಕಾಂಕ್ಷೆಯ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣ ದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ ಇದರಿಂದ ಭಾರತೀಯ ಕ್ರೀಡೆಗಳಾದ ಕಬಡ್ಡಿ, ವಾಲಿಬಾಲ್, ಬ್ಯಾಸ್ಕೆಟ್ಬಾಲ್ ಸೇರಿದಂತೆ ಹಲವು ಕ್ರೀಡೆಗಳಿಗೆ ಸಹಕಾರಿಯಾಗಲಿದೆ ಎಂದು ಅಂತರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರರಾದ ಇಸ್ಮಾಯಿಲ್ ರವರು ತಿಳಿಸಿದರು.
ತುಮಕೂರು ಸ್ಮಾರ್ಟ್ ಸಿಟಿ ಹಾಗೂ ಮಹಾನಗರಪಾಲಿಕೆ ವತಿಯಿಂದ ತುಮಕೂರು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿ, ಸಿಂಥೆಟಿಕ್ ಟ್ರ್ಯಾಕ್ ಹಾಗೂ ಕಬ್ಬಡ್ಡಿ ಆಟಕ್ಕೆ ಕ್ರೀಡಾಂಗಣ ಸಹಕಾರಿಯಾಗಲಿದ್ದು ಇದರಿಂದ ದೇಸೀ ಕ್ರೀಡೆಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಲಿದೆ ಎಂದರು.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದ ಮುಂಬಾಗ ಒಳಾಂಗಣ ಕ್ರೀಡಾಂಗಣ ಸಹ ನಿರ್ಮಾಣವಾಗುತ್ತಿದ್ದು ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದೆ ಇದರಿಂದ ಜಿಲ್ಲಾ ,ತಾಲೂಕು ,ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ ಸಾಕಷ್ಟು ಸಹಕಾರಿಯಾಗುವ ಮೂಲಕ ಜಿಲ್ಲೆ, ದೇಶ ಹಾಗೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಸಿಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು
ಇದೇ ಸಂದರ್ಭದಲ್ಲಿ ಮಾತನಾಡಿದ ಮತ್ತೋರ್ವ ಅಂತರಾಷ್ಟ್ರೀಯ ಕ್ರೀಡಾಪಟು ಆನಂದ್ ರವರು ತುಮಕೂರು ಜನತೆಯ ಮಹತ್ವಾಕಾಂಕ್ಷೆಯ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗುವ ಮೂಲಕ ನಗರದ ಜನತೆಗೆ ಉತ್ತಮ ವೇದಿಕೆ ನಿರ್ಮಾಣವಾಗುತ್ತಿದೆ ಇದಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.