ತುಮಕೂರು.:ಜಿಲ್ಲೆಯಲ್ಲಿ ಎಸ್.ಸಿ.ಪಿ./ಟಿ.ಎಸ್.ಪಿ ಯೋಜನೆಯಡಿ ಮಂಜೂರಾದ ಅನುದಾನವನ್ನು ದುರುಪಯೋಗವಾಗದಂತೆ ಸದ್ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಪರಿಶಿಷ್ಟ ಜಾತಿ ಉಪಯೋಜನೆ/ ಗಿರಿಜನ ಉಪಯೋಜನೆ ಕಾಯ್ದೆ ೨೦೧೩&೨೦೧೭ರ ಅನುಷ್ಠಾನಕ್ಕೆ ಸಂಬAಧಿಸಿದAತೆ ೨೦೨೧ರ ಜೂನ್ ಮಾಹೆಯ ಅಂತ್ಯಕ್ಕೆ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಸಾಧಿಸಿರುವ ಪ್ರಗತಿ ಮಾಹಿತಿ ಕುರಿತು ಜಿಲ್ಲಾ ಮೇಲ್ವಿಚಾರಣಾ ಸಮಿತಿಯು ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಯೋಜನೆಯ ಅನುದಾನ ರದ್ದಾಗದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಖರ್ಚು ಮಾಡಬೇಕು. ಈಗಾಗಲೇ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಬೇಕು ಎಂದು ಸೂಚನೆ ನೀಡಿದರು.
ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಯೋಜನೆಯಡಿ ಸೌಲಭ್ಯಕ್ಕಾಗಿ ಆಯ್ಕೆ ಮಾಡುವ ಫಲಾನುಭವಿಗಳು ಅರ್ಹರಾಗಿರಬೇಕು.ಅನುದಾನ ಬಳಕೆಯಾಗಿರುವ ಮಾಹಿತಿ ಮೇಲ್ವಿಚಾರಣಾ ಸಮಿತಿಗೆ ಕಡ್ಡಾಯವಾಗಿ ನೀಡಬೇಕು. ಎಸ್.ಸಿ./ಎಸ್.ಟಿ. ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಅನುದಾನವನ್ನು ಬಳಕೆ ಮಾಡಬೇಕು. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕಾಲ ಕಾಲಕ್ಕೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.
ಅಂಬೇಡ್ಕರ್, ಬಾಬು ಜಗಜೀವನ್ ರಾಂ, ವಾಲ್ಮೀಕಿ ಸೇರಿದಂತೆ ಇತರೆ ಭವನಗಳ ನಿರ್ಮಿಸಲು ಖಾಲಿ ನಿವೇಶನ ಗುರುತಿಸಿ ಬಳಿಕ ಟೆಂಡರ್ ಕರೆಯಬೇಕು. ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನಗಳ ಮೇಲ್ವಚಾರಣೆಗಾಗಿ ಆಯಾ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಸಿಇಓ ಡಾ. ಕೆ. ವಿದ್ಯಾಕುಮಾರಿ, ಪಾಲಿಕೆ ಆಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮಾ ಸೇರಿದಂತೆ ಇತರರಿದ್ದರು.