ತುಮಕೂರಿನ ಯೂತ್ ಫಾರ್ ಸೇವಾ ಸಂಸ್ಥೆ ವತಿಯಿಂದ ತುಮಕೂರಿನ ಅಮಲಾಪುರ ಬಳಿ ಇರುವ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಿಗೆ ದಿನಸಿ ಕಿಟ್ ಅನ್ನು ಸಂಸ್ಥೆಯ ವತಿಯಿಂದ ವಿತರಿಸಲಾಯಿತು.
ಇನ್ನು ಈ ಭಾಗದಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು ಸಣ್ಣಪುಟ್ಟ ಕೆಲಸಗಳನ್ನು ನಿರ್ವಹಿಸುವ ಮೂಲಕ ಜೀವನ ನಡೆಸುತ್ತಿರುವ ಇಂತಹ ಬಡ ಕುಟುಂಬಗಳು ಕರೋನ ಹೊಡೆತಕ್ಕೆ ನಲುಗಿದ್ದು ಜೀವನ ನಡೆಸುವುದೇ ದುಸ್ತರವಾಗಿದೆ ಆದ್ದರಿಂದ ಇಂತಹ ಬಡ ಕುಟುಂಬಗಳನ್ನು ಗುರುತಿಸಿ ಸುಮಾರು ಹದಿನೈದು ದಿನಗಳಿಗೆ ಆಗುವಂತಹ ದಿನಸಿ ಕೀಟಗಳನ್ನು ಸಂಸ್ಥೆಯ ವತಿಯಿಂದ ವಿತರಿಸಲಾಗುತ್ತಿದೆ ಎಂದು ಯೂತ್ ಫಾರ್ ಸೇವಾ ಸಂಸ್ಥೆಯ ಸಂಯೋಜಕರಾದ ಸುಪ್ರೀತ್ ರವರು ತಿಳಿಸಿದರು.
ಇನ್ನು ಕರೋನ ಎರಡನೇ ಅಲೆ ಸಂದರ್ಭದಲ್ಲಿ ಕರೋನ ಸೋಂಕಿತರಿಗೆ ಸಂಸ್ಥೆಯ ವತಿಯಿಂದ ಮೆಡಿಸಿನ್ ಕೀಟಗಳನ್ನು ವಿತರಿಸಲಾಗಿದೆ ಹಾಗೆಯೇ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ನಮ್ಮ ಸಂಸ್ಥೆಯ ವತಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ತರ್ಮಲ್ ಸ್ಕ್ಯಾನಿಂಗ್ ಹಾಗೂ ಮಾಸ್ಕ್ಗಳನ್ನು ವಿತರಿಸುವ ಮೂಲಕ ಈ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಂಸ್ಥೆಯು ಅವರ ನೆರವಿಗೆ ಧಾವಿಸಲಿದೆ ಎಂದರು .
ಇದೇ ಸಂದರ್ಭದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.