ತುಮಕೂರು: ಜಿಲ್ಲೆಯ ಗುಬ್ಬಿ ಹಾಗೂ ತಿಪಟೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ೭ ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿರಬೇಕು. ಆಸಕ್ತರು ತಮ್ಮ ಲಿಖಿತ ಅರ್ಜಿಯೊಂದಿಗೆ ವಕೀಲ ವೃತ್ತಿಯನ್ನು ಪೂರೈಸಿರುವ ಬಗ್ಗೆ ದೃಢೀಕರಣ ಪತ್ರ, ವಕೀಲ ವೃತ್ತಿ ನೋಂದಣಿ ದೃಢೀಕರಣ ಪತ್ರ, ವಿದ್ಯಾರ್ಹತೆಗೆ ಸಂಬAಧಿಸಿದ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳು ಸೇರಿದಂತೆ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ಜುಲೈ ೩೦ರೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಅವಧಿ ಮೀರಿದ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿಲ್ಲದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.