ಆ.23 ರಿಂದ ಶಾಲಾ-ಕಾಲೇಜು ಆರಂಭ; ರಾಜ್ಯಾದ್ಯಂತ ’ನೈಟ್ ಕರ್ಫ್ಯೂ’ ಜಾರಿ

ಆ.23 ರಿಂದ ಶಾಲಾ-ಕಾಲೇಜು ಆರಂಭ; ರಾಜ್ಯಾದ್ಯಂತ ’ನೈಟ್ ಕರ್ಫ್ಯೂ’ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.

ಶಾಲಾ ಕಾಲೇಜು ತೆರೆಯೋ ಸಂಬಂಧ ತಜ್ಞರೊಂದಿಗೆ ಚರ್ಚಿಸಲಾಗಿದೆ. ಮೊದಲ ಹಂತದಲ್ಲಿ 9, 10, 11 ಹಾಗೂ 12ನೇ ತರಗತಿಯನ್ನು ಆಗಸ್ಟ್ 23ರಿಂದ ತೆರೆಯೋದಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಶಾಲಾ-ಕಾಲೇಜುಗಳನ್ನು ವಾರದಲ್ಲಿ ಎರಡು ಬ್ಯಾಚ್ ನಂತೆ ತರಗತಿ ಆರಂಭಕ್ಕೆ ತಿಳಿಸಲಾಗಿದೆ. ಕೊರೋನಾ ನಿಯಂತ್ರಣ ಕ್ರಮದೊಂದಿಗೆ ಆರಂಭಿಸೋದಕ್ಕೆ ಅನುಮತಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರಾಥಮಿಕ ಹಾಗೂ ಇತರೆ ತರಗತಿ ಆರಂಭ ಕುರಿತಂತೆ ಕೋವಿಡ್ 3ನೇ ಅಲೆ ನೋಡಿಕೊಂಡು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Leave a Reply

Your email address will not be published. Required fields are marked *

You cannot copy content of this page

error: Content is protected !!