ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ: ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನ         

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ: ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನ         

 

ತುಮಕೂರು : ಕೈಮಗ್ಗ ಮತ್ತು ಜವಳಿ ಇಲಾಖೆಯು ೨೦೨೧-೨೨ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯದ ಗದಗ-ಬೆಟಗೇರಿಯಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ(೨೨ ಅಭ್ಯರ್ಥಿಗಳು), ತಮಿಳುನಾಡು ರಾಜ್ಯ ಸೇಲಂನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ(೧೭ ಅಭ್ಯರ್ಥಿಗಳು), ಆಂಧ್ರ ಪ್ರದೇಶ ರಾಜ್ಯ ನಲ್ಲೂರಿನ ವೆಂಕಟಗಿರಿಯಲ್ಲಿರುವ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ(೩ ಅಭ್ಯರ್ಥಿಗಳು) ಹಾಗೂ ಕೇರಳ ರಾಜ್ಯ ಕಣ್ಣೂರಿನಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ(೨ ಅಭ್ಯರ್ಥಿಗಳು)ಯಲ್ಲಿ ಪ್ರವೇಶ ಕಲ್ಪಿಸಲಾಗುವುದು. ಈ ಕೋರ್ಸಿಗೆ ಒಟ್ಟು ೪೪ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ವಿದ್ಯಾರ್ಥಿಗೆ ಮಾಸಿಕ ೧೦೦೦ ರೂ.ಗಳಿಂದ ೧೨೦೦ ರೂ.ಗಳವರೆಗೆ ಶಿಷ್ಯ ವೇತನ ನೀಡಲಾಗುವುದು. ಹಣ ಪಾವತಿಸುವ ಆಧಾರದ ಮೇಲೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.

ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯಾ ಸಂಸ್ಥೆಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಕೌನ್ಸಿಲಿಂಗ್ ಕರೆಯಲಾಗುವುದು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ ೦೧-೦೭-೨೦೨೧ಕ್ಕೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ೧೫ ರಿಂದ ೨೩ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ೧೫ ರಿಂದ ೨೫ ವರ್ಷಗಳ ವಯೋಮಿತಿಯೊಳಗಿರಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ ೧೮ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-೫೮೨೧೦೨ ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ೫ನೇ ಮುಖ್ಯರಸ್ತೆ, ಸಿದ್ಧಗಂಗಾ ಬಡಾವಣೆ, ತುಮಕೂರು ಇವರ ಕಛೇರಿ ಅಥವಾ ದೂ.ವಾ.೦೮೧೬-೨೨೭೫೩೭೦ ಅಥವಾ ದೂ.ಸಂ.೦೮೩೭೨-೨೯೭೨೨೧ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!