ಕೋ ವ್ಯಾಕ್ಸಿನ್ ಪಡೆದ ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು
ಶಿರಾ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ದೇಶದ ಮೊದಲ ಸ್ವದೇಶಿ ಲಸಿಕೆ ಕೋವ್ಯಾಕ್ಸಿನ್ ಪಡೆದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಲ್ಲಿ ಸಂಭ್ರಮ ಮನೆಮಾಡಿತ್ತು . ಇಡೀ ವಿಶ್ವವನ್ನೇ ತತ್ತರಿಸುವಂತೆ ಮಾಡಿದ್ದ ಕೋರಾನ ಮಹಾಮಾರಿಯ ವಿರುದ್ಧದ ಮೊದಲ ಹೆಜ್ಜೆಯಾಗಿ ಕೇಂದ್ರ ಸರ್ಕಾರ ಇಂದು ಕೋವಿಡ್ ಲಸಿಕೆ ವಿತರಣೆಗೆ ಚಾಲನೆ ನೀಡಿರುವ ಬೆನ್ನಲ್ಲೇ ನಗರದ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿಗಳು ಹಾಗೂ ವೈದ್ಯರಿಗೆ ಪ್ರಥಮ ಹಂತವಾಗಿ ಕೋವಿಡ್ ಲಸಿಕೆಯನ್ನು ನೀಡಲಾಗಿದೆ.
ಕೋವಿಡ್ 19 ನಿಗ್ರಹಕ್ಕಾಗಿ ಬಿಡುಗಡೆಗೊಳಿಸಿರುವ ಕೋವಿದ ಲಸಿಕಾ ವಿತರಣ ಅಭಿಯಾನದ ಹಿನ್ನೆಲೆಯಲ್ಲಿ ಇಂದು ತಾಲೂಕು ಆಸ್ಪತ್ರೆಯಲ್ಲಿ ಸಂಭ್ರಮ ಮನೆಮಾಡಿತ್ತು.
ವೈದ್ಯರು ಮತ್ತು ಲಸಿಕೆ ಪಡೆಯುವ ಕೊರನ ವಾರಿಯರ್ಸ್ಗಳಲ್ಲಿ ಸಂಭ್ರಮ ಎದ್ದು ಕಾಣುತ್ತಿದ್ದು ಯಾವುದೇ ಅಂಜಿಕೆ ಆತಂಕವಿಲ್ಲದೆ ಖುಷಿಯಿಂದ ಲಸಿಕೆ ಹಾಕಿಸಿಕೊಂಡಿದ್ದಾರೆ
ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತೆಯರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮುಂಚೂಣಿಯಲ್ಲಿ ಇರುವ ಕೋರೋಣ ವಾರಿಯರ್ಸ್ ಗೆ ಲಸಿಕೆ ನೀಡಲಾಗುತ್ತಿದೆ. ಒಟ್ಟು ಜಿಲ್ಲೆಯ 13 ಕೇಂದ್ರಗಳಲ್ಲಿ ತಲಾ ನೂರು ಕೋರನ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುತ್ತಿದೆ.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಶಾಸಕರಾದ ಚಿದಾನಂದಗೌಡರು ಕೋವಿಡ್ ಮಹಾಮಾರಿ ಯಿಂದ ಕಂಗೆಟ್ಟಿದ್ದ ಜನಕ್ಕೆ ದೇಶದ ಮೊದಲ ಸ್ವದೇಶಿ ಲಸಿಕೆ ಕೋ ವ್ಯಾಕ್ಸಿನ್ ಹಾಗೂ ಕೋವಿ ಶೀಲ್ಡ್ ನೀಡುವಲ್ಲಿ ಕೇಂದ್ರ ಸರ್ಕಾರ ಮೊದಲ ಹೆಜ್ಜೆ ಇಟ್ಟಿದ್ದು .ಇಡೀ ಪ್ರಪಂಚಕ್ಕೆ ಇಂದು ನಮ್ಮ ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆಯಿಂದ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುವಂತೆ ಮಾಡಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಆದ್ದರಿಂದ ಯಾರೊಬ್ಬರೂ ಅಂಜಿಕೆ ಇಲ್ಲದೆ ಲಸಿಕೆ ಪಡೆಯಬಹುದಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲರಿಗೂ ಲಸಿಕೆ ಲಭ್ಯವಾಗಲಿದ್ದು ಇದು ದೇಶದ ಸ್ವದೇಶಿ ಲಸಿಕೆ ಆಗಿದ್ದು ಅತಿ ಕಡಿಮೆ ಬೆಲೆಯಲ್ಲಿ ಔಷಧಿ ಮುಂದಿನ ದಿನಗಳಲ್ಲಿ ಎಲ್ಲರಿಗೂ ದೊರೆಯಲಿದೆ ಎಂದರು. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಅತಿ ಕಡಿಮೆ ಬೆಲೆಗೆ ಲಸಿಕೆ ದೊರೆಯುತ್ತಿದೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ ಎಂದರು
ಇದೇ ಸಂದರ್ಭದಲ್ಲಿ ಸಿರಾ ತಾಲೂಕಿನ ಶಾಸಕರಾದ ರಾಜೇಶ್ ಗೌಡ, ತಾಲೂಕು ದಂಡಾಧಿಕಾರಿಗಳಾದ ಮಮತಾ ವೈದ್ಯರಾದ ಶ್ರೀನಾಥ್ ಗೌಡ ರಹಮಾನ್ ಸೇರಿದಂತೆ ಇತರರು ಹಾಜರಿದ್ದರು