ಜಿಲ್ಲೆಗೆ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ೩೩.೬೫ ಕೋಟಿ ರೂ. ನಿಗಧಿ-ಸಿಇಓ

ಜಿಲ್ಲೆಗೆ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ೩೩.೬೫ ಕೋಟಿ ರೂ. ನಿಗಧಿ-ಸಿಇಓ

 

ತುಮಕೂರು -ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿಗಾಗಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ(ಎಸ್.ಡಿ.ಪಿ)ದಡಿ ೩೩.೬೫ ಕೋಟಿ ರೂ.ಗಳನ್ನು ನಿಗಧಿಪಡಿಸಿ ಕ್ರಿಯಾಯೋಜನೆ ತಯಾರಿಸಲು ನಿರ್ಧರಿಸಲಾಯಿತು.

 

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿAದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|| ಕೆ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

 

ನಂತರ ಮಾತನಾಡಿದ ಕೆ. ವಿದ್ಯಾಕುಮಾರಿ ಅವರು, ಜಿಲ್ಲೆಯಲ್ಲಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ಬಿಡುಗಡೆಯಾಗುವ ಅನುದಾನವನ್ನು ಕಳೆದ ಸಾಲಿನಿಂದ ಬಾಕಿ ಉಳಿದು ಮುಂದುವರೆದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಉಳಿದ ಅನುದಾನದಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

 

ಎಸ್.ಡಿ.ಪಿ.ಯಡಿ ೬೧ ಮುಂದುವರೆದ ಕಾಮಗಾರಿಗಳಿದ್ದು, ಸದರಿ ಕಾಮಗಾರಿಗಳನ್ನು ಪೂರ್ಣಗೊಳಿಸದಿರಲು ಸಕಾರಣ ನೀಡಬೇಕೆಂದು ಸೂಚಿಸಿದ ಅವರು, ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾಮಗಾರಿಯಾಗಲೀ ಅಗತ್ಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳದೆ ವಿನಾಕಾರಣ ಮುಂದೂಡದೆ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿ ನಿಧಾನಗತಿಯಲ್ಲಿ ಸಾಗಲು ಕಾರಣ ಏನೆಂಬುದನ್ನು ತಿಳಿದು ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಕೆ ನೀಡಿದರು.

 

ಒಂದೇ ಕಾಮಗಾರಿಯನ್ನು ಗ್ರಾಮ ಪಂಚಾಯಿತಿಯಿAದ ಹಾಗು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೆತ್ತಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಹೊಸ ಕೊಳವೆ ಬಾವಿಗಳನ್ನು ಕೊರೆಯುವ ಸಂಖ್ಯೆ ಕಡಿಮೆ ಮಾಡಿ ಹಳೆಯ ಕೊಳವೆ ಬಾವಿಗಳನ್ನು ಪುನಶ್ಚೇತನಗೊಳಿಸಬೇಕೆಂದು ಸೂಚನೆ ನೀಡಿದರು.

 

ಕೆಟ್ಟು ಹೋದ ಪಂಪು-ಮೋಟಾರ್‌ಗಳನ್ನು ಸರಿಪಡಿಸಿ ಮರುಬಳಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕೆಂದಲ್ಲದೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸಂಬAಧಿಸಿದAತೆ ಸಾರ್ವಜನಿಕ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆAದು ಸಾಕಷ್ಟು ದೂರುಗಳು ಬರುತ್ತಿದ್ದು, ಕುಡಿಯುವ ನೀರಿಗೆ ಸಂಬAಧಿಸಿದ ದೂರುಗಳನ್ನು ಸ್ವೀಕರಿಸಿದ ಕೂಡಲೇ ಇಂಜನಿಯರುಗಳು ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.

 

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಕೆ. ಮುತ್ತಪ್ಪ ಮಾತನಾಡಿ, ಲೆಕ್ಕಶೀರ್ಷಿಕೆ ೪೨೧೫ರ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ಜಿಲ್ಲೆಯ ಕುಣಿಗಲ್ ತಾಲೂಕಿಗೆ ೩.೮೯ ಕೋಟಿ ರೂ., ಮಧುಗಿರಿ-೪.೭೯ ಕೋಟಿ ರೂ., ಗುಬ್ಬಿ-೫.೯೭ ಕೋಟಿ ರೂ., ಶಿರಾ-೪.೯೭ ಕೋಟಿ ರೂ., ಪಾವಗಡ-೫.೧೬ ಕೋಟಿ ರೂ., ತುರುವೇಕೆರೆ-೨.೫೮ ಕೋಟಿ ರೂ., ಕೊರಟಗೆರೆ-೩.೧೩ ಕೋಟಿ ರೂ. ಹಾಗೂ ಚಿಕ್ಕನಾಯಕನಹಳ್ಳಿ-೩.೧೩ ಕೋಟಿ ರೂ. ಸೇರಿದಂತೆ ಒಟ್ಟು ೩೩.೬೫ ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆ ತಯಾರಿಸಲು ಸಲ್ಲಿಸಲಾಗುವುದು ಎಂದರು.

 

ಪ್ರಸಕ್ತ ಸಾಲಿನಲ್ಲಿ ಎಸ್‌ಡಿಪಿಯಡಿ ೬೧ ಮುಂದುವರೆದ ಕಾಮಗಾರಿ, ೯ ವಿದ್ಯುತ್ ಸಂಪರ್ಕ, ೬ ಬರ ಕಾಮಗಾರಿ, ೬೪ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಕಾಮಗಾರಿ, ೭೪೪ ಹೊಸ ಕಾಮಗಾರಿ ಸೇರಿದಂತೆ ಒಟ್ಟು ೮೮೪ ಕಾಮಗಾರಿಗಳನ್ನು ಕೈಗೊಳ್ಳಲು ೩೩.೬೫ ಕೋಟಿ ರೂ.ಗಳನ್ನು ನಿಗಧಿಪಡಿಸಿ ಕ್ರಿಯಾ ಸಲ್ಲಿಸಲಾಗುವುದೆಂದು ಸಭೆಗೆ ಮಾಹಿತಿ ನೀಡಿದರು.

 

ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿಯರ್ ಮಮತ, ರಮೇಶ್, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಡಿಡಿಪಿಐ ಸಿ. ನಂಜಯ್ಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಭಾಗ್ಯಮ್ಮ, ವಾರ್ತಾ ಇಲಾಖೆಯ ರೂಪಕಲಾ, ಎಲ್ಲ ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರುಗಳು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!