ದೇವನಹಳ್ಳಿ
ವಿಪಕ್ಷಗಳ ವತಿಯಿಂದ ರೈತರ ಪರವಾಗಿ, ಎಪಿಎಂಸಿ ಕಾಯ್ದೆ ವಿರುದ್ಧ
ಜ.೨೦ ರಾಜಭವನ ಚಲೋ…
ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂರ್ವಭಾವಿ ಸಭೆ
ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ
ವಿಧಾನ ಪರಿಷತ್ ಸದಸ್ಯ ಎಸ್.ರವಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ
ವಿಪಕ್ಷಗಳ ವತಿಯಿಂದ ಜ.೨೦ರಂದು ರಾಜಭವನ ಚಲೋ ಆಂದೋಲನಕ್ಕೆ ರೈತರ ಪರವಾಗಿ ನಿಲ್ಲುವ ಅನಿವಾರ್ಯ ಎದುರಾಗಿದೆ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಜ.೨೦ರ ರಾಜಭವನ ಚಲೋಗೆ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ ಸಭೆಯಲ್ಲಿ ಮಾತನಾಡಿದ್ರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕೃಷಿಕರ ವಿರುದ್ಧ, ರೈತರ ವಿರೋಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ ಹಿನ್ನಲೆಯಲ್ಲಿ ರೈತರು ೫೦ ದಿನಗಳ ಕಾಲ ಕೊರೆಯುವ ಚಳಿಯಲ್ಲಿಯೂ ಸಹ, ಪಕ್ಷಾತೀತವಾಗಿ ಆಸೆ, ಆಮಿಷಗಳಿಗೆ ಮಣಿಯದೆ, ರೈತರ ಪರವಾಗಿ ಹೋರಾಟ ಮಾಡುತ್ತಿರುವ ದೀಮಂತ ರೈತರಿಗೆ ಬೆಂಬಲವನ್ನು ಸೂಚಿಸುವ ಕೆಲಸವನ್ನು ಮಾಡಲಾಗುತ್ತಿದೆ.
ವ್ಯಾಪಾರಿಗಳ ಪರವಾಗಿ ಮಾರಾಟ ಮಾಡುತ್ತಿರುವ ಬಿಜೆಪಿಯ ಸರ್ಕಾರದ ವಿರುದ್ಧ ಆಂದೋಲನ ನಡೆಸಬೇಕಿದೆ. ಇದೊಂದು ಕರಾಳ ಶಾಸನವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಮತ್ತು ಕೇಮದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ, ರೈತರಿಗೆ ಬೆನ್ನೆಲುಬಾಗಿ ರಾಜಭವನ ಚಲೋ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ ಎಂದು ಸಭೆಯಲ್ಲಿ ಚರ್ಚಿಸಲಾಯತು
ಈ ವೇಳೆಯಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಮುನಿನರಸಿಂಹಯ್ಯ ವೆಂಕಟಸ್ವಾಮಿ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಎಸ್ಸಿ ಕಾಂಗ್ರೆಸ್ ಅಧ್ಯಕ್ಷ ಚೌಡಪ್ಪನಹಳ್ಳಿ ಎಂ.ಲೋಕೇಶ್, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್, ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ಚೇತನ್ಗೌಡ, ಪಟಾಲಪ್ಪ, ಮುಖಂಡರಾದ ಪುರುಶೋತ್ತಮ್ಕುಮಾರ್, ಎನ್.ಸೋಮಶೇಖರ್, ಎ.ಚಂದ್ರಶೇಖರ್, ಟೌನ್ ಕಾಂಗ್ರೆಸ್ ಅಧ್ಯಕ್ಷ ವೇಣುಗೋಪಾಲ್, ಕೊಯಿರ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.