ದೇಶದ ನಾಗರಿಕರ ಹಣವನ್ನು ಬಿಜೆಪಿ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿದೆ_ಡಿ .ಕೆ ಶಿವಕುಮಾರ್.
ದೇಶದ ಜನರ ಹಣವನ್ನು ಬಿಜೆಪಿ ನೇತೃತ್ವದ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದ ಸಾಮಾನ್ಯ ನಾಗರಿಕರ ಸಂಬಳ ,ಪಿಂಚಣಿ ಯಾವುದು ಕೂಡ ಹೆಚ್ಚಳ ಮಾಡದೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಾ ದೇಶದ ಜನರನ್ನು ಹೈರಾಣಾಗಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ತೈಲಬೆಲೆ ಕಡಿಮೆ ಮಾಡದೆ ಪ್ರತಿನಿತ್ಯ ಏರಿಕೆ ಮಾಡುತ್ತಾ ಹೋಗಿದ್ದು ಇದರ ಬಳುವಳಿಯಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದೇಶದ ಜನರು ತತ್ತರಿಸಿದ್ದು ಗೊತ್ತಿದ್ದರೂ ಸಹ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದರು.
ಇಂದು ಬೆಂಗಳೂರಿನಲ್ಲಿ ಸೈಕಲ್ ಜಾಥಾ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ ಶಿವಕುಮಾರ್ ಅವರು ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಕೂಡಲೇ ಕಡಿಮೆ ಮಾಡಬೇಕು ಅಗತ್ಯವಸ್ತುಗಳ ಬೆಲೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ದೇಶದಾದ್ಯಂತ ಹೆಣ್ಣುಮಕ್ಕಳು ಮನೆಯಲ್ಲಿದ್ದ ಹಣ ಒಡವೆ ವಸ್ತುಗಳನ್ನು ಮಾರಿ ಇಂದು ಜೀವನ ನಡೆಸುವಂತೆ ಸಂದಿಗ್ಧ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಜನರನ್ನು ತಂದು ನಿಲ್ಲಿಸಿದೆ. ಕರೋನ ಸಂದರ್ಭದಲ್ಲಿ ದೇಶದ ಜನರಿಗೆ ಯಾವುದೇ ಪರಿಹಾರ ನೀಡಲಿಲ್ಲ ನೊಂದ ಹಾಗೂ ಸಾವನ್ನಪ್ಪಿದ ಕುಟುಂಬಗಳಿಗೆ ಸಾಂತ್ವನ ಹೇಳಲು ಸರ್ಕಾರ ಮುಂದಾಗಿಲ್ಲ ಹಾಗಾಗಿ ಮುಂದಿನ ದಿನದಲ್ಲಿ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಸದಾ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದರು.