ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ದುರುದ್ದೇಶದಿಂದಲೇ ಜೆಡಿಎಸ್ ಪಕ್ಷ ಆಯ್ದ ಚುನಾವಣಾ ಕ್ಷೇತ್ರದಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತದೆ.

 

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸಿದರು. ಇದೀಗ ಸಿಂದಗಿ ಉಪಚುನಾವಣೆಯಲ್ಲೂ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಬಹುದಲ್ಲವೇ? ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸುವ ದುರುದ್ದೇಶದಿಂದಲೇ ಸಿಂದಗಿಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!