*ನಾನು ಅರವಿಂದ್ ಕೇಜ್ರಿವಾಲ್ ಅವರ ದೊಡ್ಡ ಅಭಿಮಾನಿ- ದೆಹಲಿ ಮಾದರಿ ಇಡೀ ದೇಶಕ್ಕೆ ಹಬ್ಬಲಿ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ*

 

*ನಾನು ಅರವಿಂದ್ ಕೇಜ್ರಿವಾಲ್ ಅವರ ದೊಡ್ಡ ಅಭಿಮಾನಿ- ದೆಹಲಿ ಮಾದರಿ ಇಡೀ ದೇಶಕ್ಕೆ ಹಬ್ಬಲಿ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ*

 

ಬೆಂಗಳೂರು ಜನವರಿ 24: ನಾನು ಆರೋಗ್ಯ ಸಚಿವನಾಗಿದ್ದಾಗ ದೆಹಲಿಗೆ ಭೇಟಿಕೊಟ್ಟು ಅಲ್ಲಿನ ಮೊಹಲ್ಲಾ ಕ್ಲಿನಿಕ್‌‌, ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆಶ್ಚರ್ಯಗೊಂಡೆ, ಅರವಿಂದ್ ಕೇಜ್ರಿವಾಲ್ ಅವರ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನುಡಿದರು.

 

ಶಾಂತಿನಗರದ ಬಸಪ್ಪ ರಸ್ತೆಯಲ್ಲಿ ಇರುವ ಆಮ್ ಆದ್ಮಿ ಕ್ಲಿನಿಕ್‌ ಕಾರ್ಯವೈಖರಿ ವೀಕ್ಷಣೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಜನತೆ ಒಂದೇ ಒಂದು ಬಾರೀ ಅವಕಾಶ ಕೊಟ್ಟರು ಈ ಅವಕಾಶವನ್ನು ಬಳಸಿಕೊಂಡ ಅವರು ಜನಪರ ಸೇವೆ ಮಾಡುವುದಕ್ಕೆ ಬಳಸಿಕೊಂಡರು. ಕೇಜ್ರಿವಾಲ್ ಅವರು ಬದಲಾವಣೆ ತಂದಿರುವ ಆರೋಗ್ಯ, ಶಿಕ್ಷಣ, ಉಚಿತ ನೀರು, ವಿದ್ಯುತ್, ಅಗತ್ಯ ಮೂಲ ಸೌಕರ್ಯಗಳನ್ನು ಎಲ್ಲಾ ರಾಜ್ಯಗಳಲ್ಲೂ ಆಗಬೇಕು ಎಂದರು.

 

ಆಮ್ ಆದ್ಮಿ ಪಕ್ಷ ಸೇರುತ್ತೀರ ಎನ್ನುವ ಪತ್ರಕರ್ತರ ಪ್ರಶ್ನೆಗೆ ” ನಾನೂ ಒಬ್ಬ ಆಮ್ ಆದ್ಮಿ ಅಂದರೆ ಜನ ಸಾಮಾನ್ಯ ಜನಸಾಮಾನ್ಯರಿಗೆ ಯಾರು ಒಳ್ಳೆಯದನ್ನು ಮಾಡುತ್ತಾರೋ ಅವರ ಜೊತೆ ನಾನು ಸದಾ ಇರುತ್ತೇನೆ, ” ಎಂದು ಮಾರ್ಮಿಕವಾಗಿ ಉತ್ತರಿಸಿದರು.

 

ಬೆಂಗಳೂರಿನ ಶಾಂತಿನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೇರಿ ಪ್ರಾರಂಭಿಸಿರುವ ಈ ದೆಹಲಿ ಮಾದರಿಯ ಮೊಹಲ್ಲಾ ಕ್ಲಿನಿಕ್ ಮಾದರಿ ನೋಡಿ ನನಗೆ ಅಪಾರ ಸಂತೋಷವನ್ನುಂಟು ಮಾಡಿದೆ. ಯಾವುದೇ ರೀತಿಯ ಅಂತಸ್ತು, ಆದಾಯ, ಜಾತಿ ಕೇಳದೆ ಎಲ್ಲರಿಗೂ ಈ ಸೌಲಭ್ಯ ವಿಸ್ತರಿಸಿರುವುದು ನನಗೆ ಮೆಚ್ಚುಗೆಯಾದ ಅಂಶಗಳಲ್ಲಿ ಒಂದು ಎಂದರು.

 

ಕೊರೋನಾ ಸಂಕಷ್ಟದ ನಂತರ ಸಣ್ಣ ಪುಟ್ಟ ಖಾಯಿಲೆಗಳಿಗೂ ಮಾತ್ರೆ ತೆಗೆದುಕೊಳ್ಳಲು ಜನಸಾಮಾನ್ಯ ಕಷ್ಟಪಡುತ್ತಿದ್ದಾನೆ. ಆಮ್ ಆದ್ಮಿ ಕ್ಲಿನಿಕ್‌ ಒಳಗೆ ಬಂದರೆ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳೇ ಇದ್ದಾರೆ, ಇವರೆಲ್ಲ ಮನೆಗೆಲಸಕ್ಕೆ ಹೋಗುವಂತಹ ಹೆಣ್ಣುಮಕ್ಕಳು ಇಂತಹ ಕಟ್ಟ ಕಡೆಯ ಜನರ ಸೇವೆಗೆ ನಿಂತಿರುವ ಆಮ್ ಆದ್ಮಿಗಳಿಗೆ ವಂದನೆಗಳನ್ನು ತಿಳಿಸಿದರು.

 

ಆನಂತರ ಆಮ್ ಆದ್ಮಿ ಕ್ಲಿನಿಕ್‌ಗೆ ಬಂದಂತಹ ರೋಗಿಗಳ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಹಿರಿಯ ಮುಖಂಡರಾದ ಗೋಪಾಲ್ ರೆಡ್ಡಿ, ಹರಿಹರನ್, ರೇಣುಕಾ ವಿಶ್ವನಾಥನ್, ಜಂಟಿ ಕಾರ್ಯದರ್ಶಿ ದರ್ಶನ್, ಮುಖ್ಯ ವಕ್ತಾರ ಶರತ್ ಖಾದ್ರಿ, ಉಪಾಧ್ಯಕ್ಷ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!