ಪೋಲಿಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಭೇಟಿ ಮಾಡಿದ ಕೆ.ಪಿ.ಸಿ.ಸಿ ನಿಯೋಗ
ತುಮಕೂರು: ದಿನಾಂಕ:- ೨೨.೧೦.೨೦೨೧ ರಂದು ತುಮಕೂರಿನಲ್ಲಿ ನಡೆದ ಬಂದ್ ವೇಳೆ ವಿಶ್ವಹಿಂದೂ ಪರಿಷತ್, ಭಜರಂಗದಳ ಮತ್ತು ಇನ್ನಿತರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಮುಸಲ್ಮಾನರ ಬಗ್ಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಟಿಪ್ಪುಸುಲ್ತಾನ್ ಬಗ್ಗೆ ಅವಾಚ್ಯಕಾರಿ ಮತ್ತು ಅಸಹನೀಯ ಪದಗಳನ್ನು ಬಳಸಿ ಕೋಮು ಪ್ರಚೋದನೆ ಮಾಡಿರುವವರ ಮೇಲೆ ಕ್ರಮ ಜರುಗಿಸುವಂತೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಗೃಹ ಸಚಿವರಾದ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೆ.ಪಿ.ಸಿ.ಸಿ ನಿಯೋಗವು ಪೋಲಿಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು..
ಈ ವೇಳೆ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್, ಸಂಸದರಾದ ನಾಸೀರ್, ಹುಸೇನ್, ಶಾಸಕರಾದ ಎನ್.ಎ.ಹ್ಯಾರಿಸ್, ವಿಧಾನ ಪರಿಷತ್ ಮಾಜಿ ಸಭಾಪತಿಗಳಾದ ವಿ.ಆರ್.ಸುದರ್ಶನ್, ಶಾಸಕಿ ಖನೀಜ್ ಫಾತಿಮಾ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಮಾಜಿ ಶಾಸಕರಾದ ಡಾ.ರಫೀಕ್ ಅಹ್ಮದ್ ರವರು ಹಾಜರಿದ್ದರು.
ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ.ರಫೀಕ್ ಅಹ್ಮದ್ ರವರು ಮಾತನಾಡಿ ಈ ಪ್ರಕರಣದ ಬಗ್ಗೆ ಸವಿವರವಾಗಿ ಪೋಲಿಸ್ ಮಹಾನಿರ್ದೇಶಕರಿಗೆ ತಿಳಿಸಿದರು. ಉದ್ದೇಶ ಪೂರ್ವಕವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಪ್ರಚೋದನಕಾರಿ ಭಾಷಣ ಮಾಡಿ ಹಾಗೂ ಸ್ವತಂತ್ರö್ಯ ಹೋರಾಟಗಾರ ಟಿಪ್ಪು ಬಗ್ಗೆ ಅವಹೇಳನಕಾರಿ ಘೋಷಣೆ ಕೂಗಿರುವ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಜರುಗಿಸಿ ತುಮಕೂರು ನಗರದಲ್ಲಿ ಶಾಂತಿಯುತ ವಾತಾವರಣ ಕಲ್ಪಿಸಿ ಎಂದು ಮನವಿ ಮಾಡಿದರು.