ಕನ್ನಡ ರಾಜ್ಯೋತ್ಸವ ಕನ್ನಡದ ನಿತ್ಯೋತ್ಸವವಾಗಲಿ_ ಕವಿತಾ ಕೃಷ್ಣ.
ತುಮಕೂರು_ ಕನ್ನಡ ಭಾಷೆ ದೇಶದ ಅತ್ಯುತ್ತಮ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬ ಕನ್ನಡಿಗನು ಮಾಡಬೇಕು ಈ ಮೂಲಕ ಕನ್ನಡ ರಾಜ್ಯೋತ್ಸವವನ್ನು ಕನ್ನಡದ ನಿತ್ಯೋತ್ಸವ ವನ್ನಾಗಿ ಆಚರಿಸಬೇಕು ಎಂದು ಸಾಹಿತಿ ಕವಿತಾಕೃಷ್ಣ ರವರು ತಿಳಿಸಿದರು.
ತುಮಕೂರಿನ ಗುಂಚಿ ಚೌಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಶ್ವದಲ್ಲಿ 6000ಕ್ಕೂ ಹೆಚ್ಚು ಭಾಷೆಗಳಲ್ಲಿ ಭಾಷೆಗಳಿವೆ ಆದರೆ ನಮ್ಮ ದೇಶದಲ್ಲಿ ಇರುವ 3600ಕ್ಕು ಹೆಚ್ಚು ಭಾಷೆಗಳಲ್ಲಿ ಕನ್ನಡ ಭಾಷೆ ಕೂಡ ಒಂದು ಸಾರ್ವಭೌಮತ್ವ ಉಳ್ಳ ಭಾಷೆಯಾಗಿದೆ ಹಾಗಾಗಿ ಪ್ರತಿಯೊಬ್ಬ ಕನ್ನಡಿಗನು ಕನ್ನಡ ಭಾಷೆ ನಾಡು ನುಡಿ ಸಂಸ್ಕೃತಿಯ ರಕ್ಷಣೆಗೆ ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಮಾತನಾಡಿ ಈ ಬಾರಿ ನಾಯಕನಟ ಪುನೀತ್ ರಾಜಕುಮಾರ್ ಅವರ ನಿಧನದ ಕಾರ್ಮೋಡ ರಾಜ್ಯಕ್ಕೆ ಬಂದಿದ್ದು ಇಂತಹ ಸಂದರ್ಭದಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸುವ ಮೂಲಕ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಗುತ್ತಿದೆ ಎಂದರು.
ಇನ್ನು ಕಾರ್ಯಕ್ರಮದಲ್ಲಿ ಆಗಮಿಸಿದ್ದ ಗಣ್ಯರಿಗೆ ಸಸಿಗಳನ್ನು ವಿತರಿಸಲಾಗಿತ್ತು ಹಾಗೂ ಗಿಡ ನೆಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಮಹಿಳಾ ಘಟಕದ ಲಲಿತಾ, ಉಪ್ಪರಹಳ್ಳಿ ಕುಮಾರ್, ಸೇರಿದಂತೆ ಸಂಘಟನೆಯ ವಿವಿಧ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.