ಎಲ್ ಕೆಜಿ- ಯುಕೆಜಿ ಸೇರಿದಂತೆ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯಲು ರಾಜ್ಯ ಸರಕಾರ ಸೂಚನೆ

ಎಲ್ ಕೆಜಿ- ಯುಕೆಜಿ ಸೇರಿದಂತೆ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯಲು ರಾಜ್ಯ ಸರಕಾರ ಸೂಚನೆ.

 

 

 

ಬೆಂಗಳೂರು: ನವೆಂಬರ್ 8ರಿಂದ ಎಲ್ ಕೆಜಿ- ಯುಕೆಜಿ ಸೇರಿದಂತೆ ಪ್ರಾಥಮಿಕ -ಪ್ರೌಢ ಹಾಗೂ ಶಾಲೆ-ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ರಾಜ್ಯ ಸರಕಾರ ಸೂಚನೆ ನೀಡಿದೆ.

 

ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ತರಗತಿ ನಡೆಸಬೇಕು ಎಂದು ಹೇಳಲಾಗಿದೆ.

 

ಈ ಬಗ್ಗೆ ಗುರುವಾರ ಸರಕಾರ ಆದೇಶ ಹಿರಡಿಸಿದ್ದು, ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಎಲ್ ಕೆಜಿ- ಯುಕೆಜಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ಇದೆ.

 

ತರಗತಿಗಳನ್ನು ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು. ಪೋಷಕರಿಗೂ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಆಗಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!