ರಾಜ್ಯದ ಮುಖ್ಯಮಂತ್ರಿ ಚುಕ್ಕಾಣಿ ಹಿಡಿಯುವ ಇಂಗಿತ ವ್ಯಕ್ತಪಡಿಸಿದ ಡಾಕ್ಟರ್ ಜಿ ಪರಮೇಶ್ವರ್.
ಇನ್ನೂ ರಾಜ್ಯಾದ್ಯಂತ ದಲಿತ ಸಿಎಂ ವಿಚಾರಕ್ಕೆ ಹಲವು ವರ್ಷಗಳಿಂದ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ ಇದಕ್ಕೆ ಪುಷ್ಟಿ ನೀಡುವಂತೆ ಇಂದು ತುಮಕೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಅವರು ಅಚ್ಚರಿಯ ಹೇಳಿಕೆ ನೀಡುವ ಮೂಲಕ ಮತ್ತೆ ದಲಿತ ಸಿಎಂ ರೇಸ್ ನಲ್ಲಿ ತಾವು ಇರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಚಲವಾದಿ ಕಲಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಾ ಜಿ ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿ ತಾವು ಕೂಡ ರಾಜ್ಯದ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿ ಇರುವ ಬಗ್ಗೆ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳುಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಡಾಕ್ಟರ್ ಜಿ ಪರಮೇಶ್ವರ್ ಅವರ ನಡುವೆ ನಡೆದ ಮಾತುಕತೆಯ ವಿಚಾರ ವಿನಿಮಯವನ್ನು ಮಾಡಿಕೊಂಡ ಡಾಕ್ಟರ್ ಜಿ ಪರಮೇಶ್ವರ್ ಅವರು ರಾಹುಲ್ ಗಾಂಧಿ ಅವರು ತಮ್ಮನ್ನು ಏತಕ್ಕಾಗಿ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಸದ್ದು ಮೊಳಗುತ್ತಿದೆ ಎಂದು ತಮ್ಮನ್ನು ಪ್ರಶ್ನಿಸಿದ್ದರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ತಾವು ಕೂಡ ರಾಜ್ಯದ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿಯುವ ಆಸೆ ತಮ್ಮಲ್ಲಿರುವ ಬಗ್ಗೆ ರಾಹುಲ್ ಗಾಂಧಿ ರವರಿಗೆ ತಿಳಿಸಿದ್ದೇನೆ ಎಂದರು ಈ ಮೂಲಕ ತಾವು ಕೂಡ ಒಮ್ಮೆ ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರುವ ಇಂಗಿತವನ್ನು ವ್ಯಕ್ತಪಡಿಸುವ ಮೂಲಕ ವಿರೋಧಿ ಬಣಕ್ಕೆ ನೇರ ಟಾಂಗ್ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ ಇನ್ನು ಈ ಬಗ್ಗೆ ಇಷ್ಟ ಇರುವವರು ಹಾಗೂ ಇಷ್ಟ ಇಲ್ಲದೆ ಇರುವವರು ಕೂಡ ಚರ್ಚೆಯಲ್ಲಿ ಭಾಗವಹಿಸುತ್ತಾರೆ ಮುಂದಿನ ದಿನದಲ್ಲಿ ಅದೃಷ್ಟ ಯಾರಿಗೆ ಒಲಿಯುತ್ತದೆ ನೋಡೋಣ ಎನ್ನುವ ಮೂಲಕ ದಲಿತ ಸಿಎಂ ವಿರೋಧಿ ಬಣಕ್ಕೆ ನೇರ ಎಚ್ಚರಿಕೆಯನ್ನು ಸಹ ಪರಂ ರವಾನಿಸಿದ್ದಾರೆ.
ಇನ್ನು ಡಾಕ್ಟರ್ ಜಿ ಪರಮೇಶ್ವರ್ ಅವರ ಅಚ್ಚರಿಯ ಈ ಹೇಳಿಕೆಯಿಂದ ಮುಂದಿನ ದಿನದಲ್ಲಿ ದಲಿತ ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಚರ್ಚೆ ನಡೆಯುವ ಎಲ್ಲಾ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತವೆ.