ಅಂಗನವಾಡಿ ಸಹಾಯಕಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ
ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಬಳಿಯ ಹಾಲ್ಕುರಿಕೆ ಗ್ರಾಮದಲ್ಲಿ ಇಂದು ಬೆಳಗ್ಗೆ 10.30 ರ ಸಮಯದಲ್ಲಿ ಹಾಲ್ಕುರಿಕೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ ಎನ್ನುವ ಮಹಿಳೆಯನ್ನ ಅದೇ ಗ್ರಾಮದ ದಿವಾಕರ್ ಎಂಬಾತ ಮಚ್ಚಿನಿಂದ ಕೊಚ್ಚಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇನ್ನು ಮೃತಪಟ್ಟ ಭಾರತಿ ಅದೇ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಮೃತಪಟ್ಟ ಮಹಿಳೆಗೆ ಗಂಡ ತಿರಿಕೊಂಡಿದ್ದು ಇಬ್ಬರು ಮಕ್ಕಳ ಜೊತೆ ಅದೇ ಗ್ರಾಮದಲ್ಲಿ ವಾಸವಿದ್ದರು. ಇನ್ನೂ ಹತ್ಯೆ ಮಾಡಿರುವ ದಿವಾಕರ್ ಎಂಬಾತ ಮೃತಪಟ್ಟ ಭಾರತಿ ಸಂಬಂಧಿಕರು ಎಂದು ತಿಳಿದುಬಂದಿದೆ.
ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.