ಮೂರು ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್ – ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರ ಮಾಡಿದೆ.
ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು. ಈ ತಿಂಗಳ ಅಂತ್ಯದಲ್ಲಿ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದರಲ್ಲಿಯೇ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ.
ರೈತರು ಪ್ರತಿಭಟನೆ ಕೈಬಿಟ್ಟು ತಮ್ಮ ಮನೆಗಳಿಗೆ ತೆರಳುವಂತೆ ಪ್ರಧಾನಿ ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಈ ಕೃಷಿ ಕಾನೂನುಗಳನ್ನು ಹಿಂಪಡೆಯಲು ನಾವು ಸಾಂವಿಧಾನಿಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮೂರು ಕೃಷಿ ಕಾನೂನುಗಳ ಗುರಿ ರೈತರನ್ನು, ವಿಶೇಷವಾಗಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವುದಾತ್ತ.
ಮೂರು ಕಾನೂನುಗಳು ರೈತರ ಪ್ರಯೋಜನಕ್ಕಾಗಿವೆಯಾದರೂ ಒಂದು ವರ್ಗದ ರೈತರ ಮನವೊಲಿಸಲು ನಮಗೆ ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಹೇಳಿದರು.