ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆರ್ ರಾಜೇಂದ್ರ ಗೆಲ್ಲಿಸಲು ಡಾ ಜಿ ಪರಮೇಶ್ವರ್ ಕರೆ.
ಮುಂದಿನ ತಿಂಗಳು ನಡೆಯಲಿರುವ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ನೊಂದಿಗೆ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ವೇಳೆ ಅರ್ ರಾಜೇಂದ್ರ ರವರಿಗೆ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾಕ್ಟರ್ ಜಿ ಪರಮೇಶ್ವರ್ ಹಾಗೂ ಮಾಜಿ ಸಚಿವರಾದ ಟಿ.ಬಿ ಜಯಚಂದ್ರ ರವರು ಸಾಥ್ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಡಾಕ್ಟರ್ ಜಿ ಪರಮೇಶ್ವರ್ ಅವರು ತುಮಕೂರಿನ ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜೇಂದ್ರ ರವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿರುವುದಕ್ಕೆ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿ ರಾಹುಲ್ ಗಾಂಧಿ ಹಾಗೂ ರಾಜ್ಯದ ಉಸ್ತುವಾರಿ ಯಾದ ಸುರ್ಜೆವಾಲಾ , ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈಗ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆ ಬಹಳ ಪ್ರಮುಖವಾದದ್ದು ಈ ಚುನಾವಣೆ ಮುಂಬರುವ ವಿಧಾನಪರಿಷತ್ ಚುನಾವಣೆಗೆ ದಿಕ್ಸೂಚಿ ಆಗಬಹುದು ಎಂದರು.
ಇನ್ನೂ ಕಳೆದ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯದಲ್ಲಿ ಗರಿಷ್ಠ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಂಡಿದ್ದೆವು ಅದೇ ರೀತಿ ಮತ್ತೊಂದು ಬಾರಿ 25 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಹಾಕಿದ್ದು ಈ ಬಾರಿಯೂ ಸಹ ಹೆಚ್ಚಿನ ಸದಸ್ಯರನ್ನು ಗೆಲ್ಲಿಸಿಕೊಳ್ಳಲು ಇದ್ದೇವೆ ಎಂದರು.
ತುಮಕೂರಿನಲ್ಲಿ ಆರ್ ರಾಜೇಂದ್ರ ಅವರು ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು ಆದರೆ ದುರ್ದೈವದ ಸಂಗತಿಯೇ ಅನೇಕ ಕಾರಣದಿಂದ ಗೆಲ್ಲಲು ಆಗಿರಲಿಲ್ಲ ಹೆಚ್ಚಿನ ಸದಸ್ಯರು ಇದ್ದರು ಸಹ ಅನೇಕ ಕಾರಣದಿಂದ ಗೆಲ್ಲಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ ಆದರೆ ಈ ಬಾರಿ ಜಿಲ್ಲೆಯ ಎಲ್ಲಾ ಮುಖಂಡರು ಸರ್ವಾನುಮತದಿಂದ ರಾಜೇಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ತಿಳಿಸಿದ್ದೆವು ಅದರಂತೆ ಈ ಬಾರಿಯೂ ಅರ್ ರಾಜೇಂದ್ರ ಅವರೇ ಅಭ್ಯರ್ಥಿಯಾಗಿದ್ದಾರೆ ಈ ಸಂಬಂಧ ಇನ್ನು ನಮ್ಮ ಜವಾಬ್ದಾರಿ ದೊಡ್ಡದಿದೆ ನಾವು ಹೆಚ್ಚಿನ ಸಂಖ್ಯೆಯ ಸದಸ್ಯರು ಇದ್ದೇವೆ ಆದ್ದರಿಂದ ಎಲ್ಲರೂ ರಾಜೇಂದ್ರ ಅವರನ್ನು ಎಲ್ಲಾ ಸದಸ್ಯರು ಮತ ಹಾಕುವಂತೆ ಎಲ್ಲಾ ಮುಖಂಡರು ಕೆಲಸ ಮಾಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಎನ್ ರಾಜಣ್ಣ ಪಾವಗಡ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್, ಮಾಜಿ ಶಾಸಕ ರಫೀಕ್ ಅಹಮದ್, ಇಕ್ಬಾಲ್ ಅಹಮದ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.