ವಿಧಾನಪರಿಷತ್ತು ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅರ್ ರಾಜೇಂದ್ರ ಭರ್ಜರಿ ಗೆಲುವು.
ಡಿಸೆಂಬರ್ 10 ರಂದು ನಡೆದಿದ್ದ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್ ರಾಜೇಂದ್ರ ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ ಅವರ ಪ್ರತಿಸ್ಪರ್ಧಿ ಬಿಜೆಪಿಯ ಲೋಕೇಶ್ ಗೌಡ ಮತಗಳನ್ನು ಪಡೆದಿದ್ದಾರೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್ ಮತಗಳನ್ನು ಪಡೆದಿದ್ದಾರೆ .
ಇನ್ನು ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೈಪೋಟಿ ನೀಡಲು ಸಂಪೂರ್ಣ ವಿಫಲವಾಗಿದೆ.
ಇನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೊದಲ ಸುತ್ತಿನಲ್ಲಿ ಹಾಗೂ ಎರಡನೇ ಸುತ್ತಿನಲ್ಲಿ ಸಹ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಪಕ್ಷಗಳಿಗೆ ಭರ್ಜರಿ ಪೈಪೋಟಿ ನೀಡಿದರು.
ಕೊನೆಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್ ರಾಜೇಂದ್ರ ಗೆ ಮತದಾರರ ಒಲವು ಹಾಗೂ ಆಶೀರ್ವಾದ ಸಿಗುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗೆಲುವಿನ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ತುಮಕೂರು ಜಿಲ್ಲೆಯಲ್ಲಿ ಭದ್ರವಾಗಿದೆ ಎನ್ನುವ ಸಂದೇಶವನ್ನು ಸಹ ರವಾನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಜೇಂದ್ರ ಪರ ಘಟಾನುಘಟಿ ನಾಯಕರುಗಳದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಾಕಷ್ಟು ಹಿರಿಯ ನಾಯಕರು ರಾಜೇಂದ್ರ ಪರ ಜಿಲ್ಲೆಯಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದರು .
ಈ ಹಿನ್ನಲೆಯಲ್ಲಿ ಕೊನೆಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್ ರಾಜೇಂದ್ರ ಗೆಲುವಿನ ನಗೆ ಬೀರಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರು ರಾಜೇಂದ್ರ ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಸಂತಸ ಇಮ್ಮಡಿಗೊಳಿಸಿದೆ
ವರದಿ ಮಾರುತಿ ಪ್ರಸಾದ್ ತುಮಕೂರು