ವಿಧಾನಪರಿಷತ್ ಚುನಾವಣೆಯ ಫಲಿತಾಂಶ ತೃಪ್ತಿ ತಂದಿದೆ _ಮಾಜಿ ಉಪಮುಖ್ಯಮಂತ್ರಿ ಡಾ. ಜಿ .ಪರಮೇಶ್ವರ್
ವಿಧಾನ ಪರಿಷತ್ ಚುನಾವಣೆಯ ಪಲಿತಾಂಶ ಬಹಳ ತೃಪ್ತಿ ನೀಡಿದೆ. ಕಾಂಗ್ರೆಸ್ ಪಕ್ಷದ ಪರ ರಾಜ್ಯದಲ್ಲಿ ಅಲೆ ಇರುವುದು ಖಚಿತವಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ನಮ್ಮ ಪಕ್ಷದಿಂದ ಗೆದ್ದ ಎಲ್ಲ ಅಭ್ಯರ್ಥಿಗಳಿಗೆ ನನ್ನ ಅಭಿನಂದನೆಗಳು. ಪಕ್ಷದ ಕಾರ್ಯಕರ್ತರ ಶ್ರಮದಿಂದಲೆ ಇದು ಸಾಧ್ಯವಾಗಿದೆ. ಅವರಿಗೆ ಧನ್ಯವಾದಗಳು!
ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿಗಳಾದ ಡಾಕ್ಟರ್ ಜಿ ಪರಮೇಶ್ವರ್ ಅವರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.