ಕರ್ನಾಟಕ ಬಂದ್ ಹಿಂಪಡೆದ ಕನ್ನಡಪರ ಸಂಘಟನೆಗಳು.
ತುಮಕೂರು_ಬೆಳಗಾವಿಯಲ್ಲಿ ಕಳೆದ ಹತ್ತು ದಿನಗಳ ಹಿಂದೆ ಎಂಇಎಸ್ ಹಾಗೂ ಶಿವಸೇನೆಯ ಸಂಘಟನೆಯ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು.
ಇದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಎಡೆಮಾಡಿತ್ತು ಇನ್ನು ಪದೇಪದೇ ಎಂಇಎಸ್ ಹಾಗೂ ಶಿವಸೇನೆ ಪದೇಪದೇ ಗಡಿ ವಿಚಾರ ಹಾಗೂ ಕನ್ನಡ ಭಾಷೆಯ ನೆಲ-ಜಲದ ಬಗ್ಗೆ ಪದೇ ಪದೇ ಕ್ಯಾತೆ ಮಾಡುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟುಮಾಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡುತ್ತಿದ್ದರು.
ಇದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಎಂಇಎಸ್ ಹಾಗೂ ಶಿವ ಸೇನೆ ಸಂಘಟನೆಯ ರಾಜ್ಯದ್ಯಂತ ನಿಷೇಧ ಮಾಡಬೇಕು ಎಂದು ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದವು.
ಇನ್ನು ಕನ್ನಡಪರ ಸಂಘಟನೆಗಳ ಕರ್ನಾಟಕ ಬಂದ್ ಗೆ ತೀವ್ರ ವಿರೋಧ ಕೂಡ ವ್ಯಕ್ತವಾಗಿತ್ತು ಇನ್ನು ಕರೋನಾ ಬಂದಾಗಿನಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದೆ ಹಾಗೂ ಕಳೆದ ಎರಡು ವರ್ಷಗಳಿಂದ ಚಿತ್ರೋದ್ಯಮ ಸಾಕಷ್ಟು ಹೊಡೆತದಿಂದ ಚೇತರಿಸಿಕೊಳ್ಳುವ ಸಮಯದಲ್ಲಿ ಕಳೆದ ಎರಡು ವರ್ಷಗಳಿಂದ ಬಾಕಿ ಉಳಿದಿದ್ದ ಚಲನಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದ್ದು ಕನ್ನಡಪರ ಸಂಘಟನೆಗಳ ಕರ್ನಾಟಕ ಬಂದ್ ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು ಹಾಗೂ ಸರ್ಕಾರದಿಂದ ಕೂಡ ಸಾಕಷ್ಟು ಒತ್ತಡ ಬಂದ ಹಿನ್ನೆಲೆಯಲ್ಲಿ .
ಇದಕ್ಕೆ ಮಣಿದ ತುಮಕೂರಿನ ಕನ್ನಡಪರ ಸಂಘಟನೆಗಳು ಯಾರಿಗೂ ತೊಂದರೆ ಕೊಡುವ ಉದ್ದೇಶವಿಲ್ಲ ಆದರೆ ಬಂದ್ ಹಿಂಪಡೆಯುವ ನಿರ್ಧಾರ ಈಗ ಅವಶ್ಯಕವಾಗಿದ್ದು ಕೂಡಲೇ ಇದಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲವನ್ನು ವಾಪಸ್ ಪಡೆದಿವೆ.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ತುಮಕೂರಿನ ಕನ್ನಡಪರ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷರಾದ ಧನಿಯಾ ಕುಮಾರ್ ಅವರು ಈ ಬಗ್ಗೆ ಸ್ಪಷ್ಟ ಪಡಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಹಿಂಪಡೆಯುವುದಾಗಿ ಘೋಷಿಸಿದ್ದಾರೆ.
ವರದಿ _ಮಾರುತಿ ಪ್ರಸಾದ್ ತುಮಕೂರು