ಒಮಿಕ್ರಾನ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಒಮಿಕ್ರಾನ್ ಪ್ರಕರಣಗಳನ್ನು ನಿಯಂತ್ರಣಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಆರೋಗ್ಯ ಮೂಲಸೌಕರ್ಯಗಳಾದ ಔಷಧಿ, ಐಸಿಯು ಬೆಡ್‍ಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಷಯ ತಿಳಿಸಿದರು.ಇಡೀ ದೇಶದಲ್ಲಿಯೇ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ದೇಶದ 8 ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಒಂದು ಎಂದು ಕೇಂದ್ರಸರ್ಕಾರ ಗುರುತಿಸಿದೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.
ಹಿಂದೂ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಹಿಂದೂ ದೇವಸ್ಥಾನಗಳನ್ನು ಸರ್ಕಾರದ ಕಟ್ಟುಪಾಡುಗಳಿಂದ ಮುಕ್ತಮಾಡುತ್ತಿದ್ದೇವೆ, ಡಿ.ಕೆ.ಶಿವಕುಮಾರ್ ರವರ ಹೇಳಿಕೆಯು ಹಿಂದೂ ದೇವಸ್ಥಾನ ಹಾಗೂ ಹಿಂದೂ ಭಕ್ತರ ವಿರುದ್ಧ ಅವರಿಗಿರುವ ಮನೋಭಾವ ವ್ಯಕ್ತ ಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.