ಮತದಾರರ ಪಟ್ಟಿಯಲ್ಲಿ ಮಾಜಿ ಗ್ರಾ. ಪo. ಸದಸ್ಯರ ಹೆಸರು ಕೈಬಿಟ್ಟು ಎಡವಟ್ಟು, ತನಿಖೆಗೆ ಒತ್ತಾಯಿಸಿದ ತುಮಕೂರು ಗ್ರಾಮಾಂತರ ಶಾಸಕ ಡಿ. ಸಿ ಗೌರಿಶಂಕರ್.
ತುಮಕೂರು_ತುಮಕೂರು ತಾಲೂಕಿನ ಹರಳೂರು ಗ್ರಾಮ ಪಂಚಾಯತ್ ಐನಾಪುರ ಗ್ರಾಮದಲ್ಲಿ ಮಾಜಿ ಸದಸ್ಯರು ಹಾಗೂ ಹಾಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಪ್ರಕರಣಕ್ಕೆ ತುಮಕುರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಾಸಿಲ್ದಾರ್ ಕಚೇರಿ ಆವರಣದಲ್ಲಿ ಮಾಹಿತಿ ನೀಡಿದ ಶಾಸಕರು ಇನ್ನು ಬದುಕಿರುವ ಮಾಜಿ ಗ್ರಾಮ ಪಂಚಾಯತ್ ಸದಸ್ಯರನ್ನು ಬದುಕಿರುವಾಗಲೇ ಮೃತಪಟ್ಟಿದ್ದಾರೆ ಎಂದು ಆನ್ಲೈನ್ ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಘಟನೆಗೆ ಕಾರಣ ಕರ್ತರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ತಿಳಿಸಿದರು.
ಇನ್ನು ಮತ್ತೋರ್ವ ಐನಾಪುರ ಗ್ರಾಮದ ಹಾಲಿ ಗ್ರಾಮ ಪಂಚಾಯತ್ ಸದಸ್ಯ ಶಾರದಾ ಎಂಬವರ ಹೆಸರನ್ನು ಸಹ ಇದೇ ರೀತಿ ಮತದಾರರ ಪಟ್ಟಿಯಿಂದ ಕೈಬಿಟ್ಟು ನಂತರ ಸೇರ್ಪಡೆ ಮಾಡುವ ಮಾಡಿದ್ದು ಕಂಡುಬಂದಿದೆ.
ಇನ್ನೂ ಸ್ಥಳೀಯವಾಗಿ ಬೂತ್ ಮಟ್ಟದ ಅಧಿಕಾರಿಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದಿರುತ್ತದೆ ಆದರೆ ಯಾವ ಕಾರಣಕ್ಕೆ ಈ ರೀತಿ ಆಗಿದೆ ಎಂಬುದನ್ನು ತನಿಖೆ ನಡೆಸಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸ್ಥಳೀಯವಾಗಿ ಕರ್ತವ್ಯ ನಿರ್ವಹಿಸುವ ಬೂತ್ ಮಟ್ಟದ ಅಧಿಕಾರಿಗಳು ಸರಿಯಾಗಿದ್ದರೆ ಇಂತಹ ಘಟನೆಗಳು ನಡೆಯುವುದಿಲ್ಲ ಇನ್ನು ಬದುಕಿರುವ ಸದಸ್ಯರನ್ನೇ ಮೃತಪಟ್ಟಿದ್ದಾರೆ ಎಂದರೆ ಸಾಮಾನ್ಯ ನಾಗರಿಕರ ಪಾಡೇನು ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
ಇನ್ನು ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಇಂತಹ ಗೊಂದಲಗಳು ದೊಡ್ಡ ದಂದೆಗೆ ಸಾಕ್ಷಿಯಾಗಿದೆ. ಇದು ಕೇವಲ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಇಂತಹ ಘಟನೆಗಳು ನಡೆಯುತ್ತಿಲ್ಲ ರಾಜ್ಯಾದ್ಯಂತ ಇಂತಹ ಘಟನೆಗಳು ವರದಿಯಾಗುತ್ತಿದೆ ಕೂಡಲೇ ಚುನಾವಣಾ ಆಯೋಗ ಹಾಗೂ ಸರ್ಕಾರ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ವರದಿ ಮಾರುತಿ ಪ್ರಸಾದ್ ತುಮಕೂರು