ತಾಲ್ಲೋಕಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್ ಸೂಚನೆ

ತಾಲ್ಲೋಕಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್ ಸೂಚನೆ

ತಾಲೂಕಿನ ಸಮಗ್ರ ಅಭಿವೃದ್ಧಿಗೆ ತಾಲೂಕಿನ ಎಲ್ಲ ಅಧಿಕಾರಿಗಳು ಆದ್ಯತೆ ನೀಡಬೇಕೆಂದು ಗ್ರಾಮಾಂತರ ಶಾಸಕ ಡಿ ಸಿ ಗೌರಿಶಂಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು

 

ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲೂಕಿನಲ್ಲಿ ಇಲಾಖೆ ಅಧಿಕಾರಿಗಳು ನಾಗರೀಕರಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

 

 

ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು ತಾಲೂಕಿನಲ್ಲಿ ಆಡಳಿತ ಯಂತ್ರ ಸುಸೂತ್ರವಾಗಿ ನಡೆಯಬೇಕೆಂದರೆ ಅಧಿಕಾರಿಗಳು ಜನಸ್ನೇಹಿಯಾಗಿದ್ದಾಗ ಮಾತ್ರ ಸಾಧ್ಯವಾಗುತ್ತದೆ. ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ತಾಲ್ಲೋಕಿನಲ್ಲಿ‌ ಕುಡಿಯುವ ನೀರು, ಜಾನುವಾರುಗಳಿಗೆ ಅವಶ್ಯಕವಿರುವ ಅಂಶಗಳ ಕಡೆಗೆ ಅಧಿಕಾರಿಗಳು ಹೆಚ್ಚಿನ ಗಮನ ನೀಡುವಂತೆ ಖಡಕ್ ಸೂಚನೆ ನೀಡಿದರು.

 

ತಾಲ್ಲೋಕಿನ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಹಾಗೂ ಯೋಜನಾ ಅನುಷ್ಠನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು

 

ತಾಲ್ಲೋಕಿನಾದ್ಯಂತ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು ಅಂತಹವರ ವಿರುದ್ಧ ಕೂಡಲೇ ಎಫ್.ಐ.ಆರ್ ದಾಖಲಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಅಬಕಾರಿ ಅಧಿಕಾರಿಗಳಿಗೆ ಮತ್ತು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು

 

ಅನಗತ್ಯವಾಗಿ ವಿಜಲೆನ್ಸ್ ನ ಹೆಸರಿನಲ್ಲಿ ರೈತರಿಗೆ ಬೆಸ್ಕಾಂ ಅಧಿಕಾರಿಗಳಿಗೆ ತೊಂದರೆ ನೀಡುತ್ತಿರುವುದು ಕೇಳಿಬಂದಿದ್ದು ರೈತರಿಗೆ ಯಾವುದೇ ರೀತಿ ತೊಂದರೆ ನೀಡದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು ನಿರ್ವಹಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕರು ಟಾಸ್ಕ್ ಫೋರ್ಸ್ ರಚಿಸಿಕೊಂಡು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ತಿಳಿ ಹೇಳಿದರು

Leave a Reply

Your email address will not be published. Required fields are marked *

You cannot copy content of this page

error: Content is protected !!